

ಕಾರ್ಕಳ ,ಸೆ.10: ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನು ನಾಲ್ಕೇ ದಿನ ಬಾಕಿಯಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಎಎಸ್ಪಿ ಇಷಿತಾ ಗುಪ್ತಾ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಶಾಂತಿ ಸಭೆ ನಡೆಯಿತು.
ಗಣೇಶ ಹಬ್ಬದ ಆಚರಣೆ ಸಂದರ್ಭದಲ್ಲಿ ಮೈಕ್ ಅನುಮತಿಯನ್ನು ಪಡೆಯಬೇಕು ಹಾಗೂ ರಾತ್ರಿ 10 ಗಂಟೆಯ ಬಳಿಕ ಮೈಕ್ ಬಳಸುವಂತಿಲ್ಲ. ಬ್ಯಾನರ್ ಹಾಗೂ ಬಂಟಿಗ್ಸ್ ಹಾಕಲು ಠಾಣಾಧಿಕಾರಿಗಳ ಅನುಮತಿ ಪಡೆಯಬೇಕು.ಗಣೇಶ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯೋಜಕರು ಎಚ್ಚರಿಕೆ ವಹಿಸಬೇಕು. ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭೆಯಲ್ಲಿ ಎಚ್ಚರಿಸಲಾಯಿತು.
ಗಣೇಶ ಮೂರ್ತಿ ವಿಸರ್ಜನೆ ವೇಳೆ ವಾಹನಗಳನ್ನು ಸುಸ್ಥಿಯಲ್ಲಿಡಬೇಕು. ಮೆರವಣಿಗೆ ವೇಳೆ ನೂಕುನುಗ್ಗಲು ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಅಲ್ಲದೇ ವಿಗ್ರಹವನ್ನು ಜಲಸ್ತಂಭನ ಮಾಡುವ ಸಂದರ್ಭದಲ್ಲಿ ಈಜು ಬರುವವರೇ ನೀರಿಗೆ ಇಳಿಯಬೇಕು ಹಾಗೂ ಲೈಫ್ ಜಾಕೆಟ್ ವ್ಯವಸ್ಥೆ ಹೊಂದಿರಬೇಕು ಎಂದು ಪೊಲೀಸರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ, ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್, ಕಾರ್ಕಳ ನಗರ ಠಾಣೆಯ ಎಸ್‌ಐ ಶಿವಕುಮಾರ್, ನವೀನ್ ಬೋರ್ಕರ್ ಮುಂತಾದವರು ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
