

ಉಡುಪಿ,ನ.08: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಮುನಿಯಾಲಿನ ಇಬ್ಬರು ಆರೋಪಿಗಳು ಓರ್ವ ಅಪ್ರಾಪ್ತ ಬಾಲಕ, ಉತ್ತರ ಪ್ರದೇಶ ಮೂಲದ ಪವನ್ ಕುಮಾರ್ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಬ್ರಿ ತಾಲೂಕಿನ ಮುನಿಯಾಲು ಗಾಂಧಿ ಮೈದಾನದ ಬಳಿಯ ನಿವಾಸಿ ಆದರ್ಶ ಕಾಂಚನ್, ಮುನಿಯಾಲು ಚಟ್ಕಲ್ ಪಾದೆಯ ದಿನೇಶ್ ಶೆಟ್ಟಿ, ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖ್ಪುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಓರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.ಈ ತಂಡವು ನ. 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖ್ಪುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದರು.
ಪವನ್ ಕುಮಾರ್ ನನ್ನು ನ. 05 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಭಾಗಿಯಾದ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.
ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳಾದ ಆದರ್ಶ ಕಾಂಚನ್ ಹಾಗೂ ದಿನೇಶ್ ಶೆಟ್ಟಿ ಎಂಬವರನ್ನು ನ.7 ರಂದು ಬಂಧಿಸಿ, ಪ್ರಕರಣದ ತನಿಖಾಧಿಕಾರಿಯಾಗಿರುವ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಿದ್ದಾರೆ.ಹಲ್ಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುನಿಯಾಲು ಪಡುಕುಡೂರು ನಿವಾಸಿ ಪ್ರಸನ್ನ ಶೆಟ್ಟಿ ಎಂಬಾತ ತಲೆಮರೆಸಿಕೊಂಡಿದ್ದು,ಆತನ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.


































.
.
.
.
.
.
.
.
.
.
.
.
.
.
.
.
.
.
.
.
