

ನವದೆಹಲಿ, ಅ.15: ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಮತ್ತು ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಏಕಪಕ್ಷೀಯವಾಗಿ ಅಳಿಸಿಹಾಕಲಾಗಿದೆ ಎಂದು ಆರೋಪಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ‘ಇಂಡಿ’ ಮೈತ್ರಿಕೂಟದ ಪ್ರಮುಖ ನಾಯಕರು ಸಲ್ಲಿಸಿರುವ ಮಹತ್ವದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ.
ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಟಿಎಂಸಿ ಸಂಸದ ಸೌಗತ ರಾಯ್, ಶಿವಸೇನಾ ) ನಾಯಕ ಸಂಜಯ್ ರಾವತ್, ಎನ್ಸಿಪಿ (ಎಸ್ಪಿ) ನಾಯಕಿ ಸುಪ್ರಿಯಾ ಸುಳೆ, ಜೆಎಂಎAನ ಮಹುವಾ ಮಾಝಿ, ಸಿಪಿಐ ನಾಯಕ ಡಿ. ರಾಜಾ, ಸಿಪಿಐ(ಎಂ)ನ ಎಂ.ಎ. ಬೇಬಿ ಮತ್ತು ಐಯುಎಂಎಲ್ನ ಇ.ಟಿ. ಮೊಹಮ್ಮದ್ ಬಶೀರ್ ಸೇರಿದಂತೆ ವಿಪಕ್ಷಗಳ ಅಗ್ರ ನಾಯಕರು ಜಂಟಿಯಾಗಿ ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 12 ರಂದು ರಾಹುಲ್ ಗಾಂಧಿ ಹಾಗೂ ವಿಪಕ್ಷ ಮುಖಂಡರು ದೆಹಲಿಯಲ್ಲಿ ಸುಪ್ರೀಂ ಕೋರ್ಟ್ ಕಡೆಗೆ ಬೃಹತ್ ಮೆರವಣಿಗೆ ನಡೆಸಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿದ್ದರು. ಇದರ ಮುಂದುವರಿದ ಭಾಗವಾಗಿ ನ್ಯಾಯಾಲಯದಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಲ್ಲಿಸಲಾಗಿದೆ.
ಈ ಹಿಂದೆ ಈ ಆರೋಪಗಳನ್ನು ನಿರಾಕರಿಸಿದ್ದ ಆಯೋಗ, ಮತದಾರರ ಪಟ್ಟಿಯಿಂದ ನಕಲಿ ಮತದಾರರನ್ನು ತೆಗೆದುಹಾಕಲು ಮತ್ತು ವಲಸೆ ಹೋದವರ ವಿವರಗಳನ್ನು ನವೀಕರಿಸಲು ಎಸ್ಐಆರ್ ನಿಯಮಾನುಸಾರವಾಗಿ ನಡೆಯುತ್ತಿದೆ ಎಂದು ಹೇಳಿತ್ತು. ಈಗ ನ್ಯಾಯಾಲಯದಲ್ಲಿ ಆಯೋಗವು ತನ್ನ ಸಮಗ್ರ ವರದಿಯನ್ನು ಸಲ್ಲಿಸಬೇಕಿದೆ.






.
.
.
.
.
.
.
.
.
.
.
.
.
.
.
.
.
.
.
.
