ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಧಾವಿಸಿದ ಶಾಸಕ ಹರೀಶ್ ಪೂಂಜಾ ಪೊಲೀಸರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಶಾಸಕ ಹಾಗೂ ಅವರ ಬೆಂಬಲಿಗರು ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸಿದ್ದರು.ಮಾತ್ರವಲ್ಲದೇ ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಪೊಲೀಸರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು.
ಈ ವಿಚಾರದ ಕುರಿತಂತೆ ಪೊಲೀಸರು ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಮುಂದಾಗಿದ್ದು ಪೊಲೀಸರ ತಂಡ ಶಾಸಕ ಪುಂಜಾ ಮನೆಗೆ ಆಗಮಿಸಿದ್ದು, ಶಾಸಕರ ಮನೆಯಲ್ಲಿ ಅವರ ಪರ ವಕೀಲರು ಕಾನೂನು ಅಂಶಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ.
ಏಕಾಎಕಿ ನೋಟೀಸ್ ನೀಡದೇ ವಿಚಾರಣೆಗೆ ಹಾಜರಾಗಲು ಪೊಲೀಸರು ಕರೆಸುವಂತಿಲ್ಲ ಎನ್ನುವುದು ವಕೀಲರ ವಾದ
ಪೊಲೀಸರು ಶಾಸಕರ ಮನೆಗೆ ತೆರಳಿದ ಬೆನ್ನಲ್ಲೇ ಶಾಸಕರ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ