Share this news

 

 

 

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಬದಲಾಗಿವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ನಮ್ಮ ಕಾರ್ಯಕರ್ತನ ಸಾವು ಪಕ್ಷದ ಕಾರ್ಯಕರ್ತರಿಗೆ ತೀವೃ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್ವೇರ್ ಇಂಜಿನಿಯರ್. 2-3 ತಿಂಗಳಿAದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ರಾಜ್ಯದ ಜನರಿಗೆ ರಕ್ಷಣೆ ಸಿಗುತ್ತಿಲ್ಲ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ಹೊರಹಾಕಿದ ಅವರು, ಪೊಲೀಸರನ್ನು ರಾಜಕೀಯ ದ್ವೇಷ ಸಾಧಿಸಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮವಾಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.

 

 

 

 

Leave a Reply

Your email address will not be published. Required fields are marked *