

ಬೆಂಗಳೂರು,ನ.23: ಬೆಂಗಳೂರಿನ ನಕಲಿ ಔಷಧಿ ಜಾಲದ ಕಿಂಗ್ಪಿನ್ ಆರ್. ಪ್ರಶಾಂತ್ ಬಾಬುನನ್ನು 2 ಕೋಟಿ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ದೆಹಲಿ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕರ್ನಾಟಕದ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಶಾಂತ್ನನ್ನು ಬಂಧಿಸಿತ್ತು. ಇದೀಗ ದೆಹಲಿಯ ಮೋತಿಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ದೆಹಲಿ ಪೊಲೀಸರು ಬಾಡಿ ವಾರಂಟ್ ಮೂಲಕ ಆತನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಸಿಗಬೇಕಿದ್ದ ಇಂಜೆಕ್ಷನ್ಗಳನ್ನೂ ಹಣಕ್ಕೆ ಮಾರಾಟ ಮಾಡಿರುವ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬೆAಗಳೂರು ಹೊರವಲಯದ ತಾವರೆಕೆರೆ ಮತ್ತು ಬಿಡದಿ ಸಮೀಪದ ಫಾರ್ಮ್ಹೌಸ್ನಲ್ಲಿ ಯಾವುದೇ ಪರವಾನಗಿ ಇಲ್ಲದೆ ನಕಲಿ, ಕಳಪೆ ಹಾಗೂ ಅವಧಿ ಮುಗಿದ ಔಷಧಿಗಳಿಗೆ ಪ್ರತಿಷ್ಠಿತ ಕಂಪನಿಗಳ ನಕಲಿ ಲೇಬಲ್ ಅಂಟಿಸಿ ಪ್ಯಾಕ್ ಮಾಡಿ ಕರ್ನಾಟಕ ಸೇರಿದಂತೆ 6 ರಾಜ್ಯಗಳ 15,000ಕ್ಕೂ ಹೆಚ್ಚು ರೋಗಿಗಳಿಗೆ ಈ ಔಷಧಿಗಳು ಪೂರೈಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಷ್ಟೇ ಅಲ್ಲದೆ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಎರಡು ಕ್ಯಾನ್ಸರ್ ಇಂಜೆಕ್ಷನ್ಗಳನ್ನು ಖರೀದಿಸಿದರೆ ಕಂಪನಿಯು ಒಂದು ಇಂಜೆಕ್ಷನ್ ಉಚಿತವಾಗಿ ನೀಡುತ್ತಿತ್ತು. ಆದರೆ ಈ ಮಾಹಿತಿಯನ್ನು ರೋಗಿಗಳಿಗೆ ತಿಳಿಸದೆ ಕಿಂಗ್ಪಿನ್ ಪ್ರಶಾಂತ್ ಬಾಬು ಉಚಿತವಾಗಿ ಸಿಗುತ್ತಿದ್ದ ಇಂಜೆಕ್ಷನ್ಗಳನ್ನೂ ಹಣ ಪಡೆದು ಮಾರಾಟ ಮಾಡುತ್ತಿದ್ದ. ಇಂಜೆಕ್ಷನ್ ಬಳಕೆ ಮಾಡಿದ ಬಳಿಕ ರೋಗಿ ಮೃತಪಟ್ಟರೆ ಉಳಿದ ಇಂಜೆಕ್ಷನ್ಗಳನ್ನು ವಾಪಸ್ ಪಡೆದು, ಬೇರೆಯವರಿಗೆ ಮೂಲ ಬೆಲೆಗೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದ ಎಂಬ ಆರೋಪವೂ ಕೇಳಿಬಂದಿದೆ. ಈ ಮೂಲಕ ಕ್ಯಾನ್ಸರ್ ರೋಗಿಗಳ ಸಂಕಷ್ಟವನ್ನೇ ದಂಧೆಗೆ ಬಳಸಿಕೊಂಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಆಗಸ್ಟ್ ನಲ್ಲಿ ಬಿಡದಿ ಬಳಿಯ ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 5 ಕೋಟಿ ಮೌಲ್ಯದ ನಕಲಿ ಔಷಧಿಗಳನ್ನು ವಶಪಡಿಸಿಕೊಂಡಿದ್ದರು. ದಾಳಿಯ ಬೆನ್ನಲ್ಲೇ ಅಜರ್ಬೈಜಾನ್ಗೆ ಪರಾರಿಯಾಗಿದ್ದ ಪ್ರಶಾಂತ್ನನ್ನು, ಸೆಪ್ಟೆಂಬರ್ನಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮರಳಿದಾಗ ಎಸ್ಐಟಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.





.
.
.
.
.
.
.
.
.
.
.
.
.
.
.
.
.
.
.
.
