
ಹೆಬ್ರಿ,ಜ.01: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾಪುರಸ್ಕಾರ ಸಮಾರಂಭವು ಡಿ.31 ರಂದು ನಡೆಯಿತು.
ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಶಿಕ್ಷಣ ಮಾತ್ರವಲ್ಲ ಸಂಸ್ಕಾರ ಮುಖ್ಯ, ಅದರಂತೆ ಕಲೆ ಮತ್ತು ಉತ್ತಮ ಆಹಾರ ಮುಖ್ಯವಾಗುತ್ತದೆ ಹಾಗೂ ವಿನಯ, ಶಿಸ್ತು ಇತ್ಯಾದಿ ಗುಣಗಳನ್ನು ಬೆಳೆಸಿಕೊಂಡು , ಆದರ್ಶ ವ್ಯಕ್ತಿಗಳಾಗಿ ಎಂದು ಸಲಹೆಗಳನ್ನು ನೀಡಿದರು.
ಅಮೃತಭಾರತಿ ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ಮುಖ್ಯ ಅತಿಥಿಗಳಾಗಿ ಪ್ರವೀಣ್ ಆಚಾರ್ಯ, ಪೋಷಕರಾದ ಪ್ರವೀಣ್ ಹೆಗ್ಡೆ, ಸುಮಾ ಗುರುರಾಜ ಮಯ್ಯ, ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ಗುರುವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಅನಿತಾ ಹೈಕಾಡಿ ಸ್ವಾಗತಿಸಿ, ಪ್ರೌಢಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಸುಮನಾವಾಣಿ ನಿರೂಪಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ಭವಿತಾ ಧನ್ಯವಾದವಿತ್ತರು.


.
.
