
ಕಾರ್ಕಳ,ಫೆ.16 : 2027 ರಲ್ಲಿ ಕಾರ್ಕಳದ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುತ್ತಾರೆ.
ಈ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಮಹಾವೀರ್ ಹೆಗ್ಡೆಯವರ ನೇತೃತ್ವದಲ್ಲಿ ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ರವರೊಂದಿಗೆ ಜೈನ ಸಮುದಾಯದ ಪ್ರಮುಖರೊಂದಿಗೆ ಪೂರ್ವಸಿದ್ಧತಾ ಸಭೆ ಫೆ.16 ರಂದು ನಡೆಯಿತು
ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನೇಕ ಜೈನ ಬಸದಿಗಳು, ಕೆರೆಗಳು, ದೇವಸ್ಥಾನಗಳು, ಯಾತ್ರಿ ನಿವಾಸಗಳ ಜೊತೆಗೆ ಅನೇಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದರೊಂದಿಗೆ ಸಾರ್ವಜನಿಕ ವಿವಿಧ ಕಾಮಗಾರಿಗಳು ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಪಡಿಸುವ ದೃಷ್ಠಿಯಲ್ಲಿ ಜೊತೆಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಜೈನ ಸಮಾಜದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜೈನ ಸಮುದಾಯದ ಹಿರಿಯರಾದ ಅನಂತರಾಜ ಪೂವಣಿ, ಮೋಹನ್ ಪಡಿವಾಳ್ , ಸಿ.ಎ ಪ್ರಭಾತ್ ಕುಮಾರ್, ಎಂ ಕೆ ಸುವ್ರತ್ ಕುಮಾರ್, ಸುನಿಲ್ ಕುಮಾರ್ ಬಜಗೋಳಿ, ಭರತ್ ಕುಮಾರ್ ಜೈನ್ ಇರ್ವತ್ತೂರು , ಶೀತಲ್ ಜೈನ್ ಶಿರ್ಲಾಲು, ಜೊತೆಗೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

.
.
.
.
.
.
.
.
.
.
