

ನವದೆಹಲಿ,ಸೆ.16: ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಅನುಪಮ ಕೊಡುಗೆಯನ್ನು ಪರಿಗಣಿಸಿ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಅನಂತ್ ನಾಗ್ ಸಾಧನೆಗಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಹಲವಾರು ತಲೆಮಾರುಗಳಿಗೆ ಸ್ಫೂರ್ತಿಯಾಗಿರುವ ಅವರ ಅದ್ಭುತ ಸಿನಿಮಾ ಪಯಣಕ್ಕಾಗಿ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಅನ್ನು ನೀಡಲಾಗುತ್ತಿದೆ. ಗುಜರಾತ್ನ ಕೆವಾಡಿಯಾದಲ್ಲಿ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅನಂತ್ ನಾಗ್ ಅವರನ್ನು ಅಭಿನಂದಿಸಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ದಿಗ್ಗಜ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು. ದಶಕಗಳ ಕಾಲ ಅವರ ಸಹಜ ಅಭಿನಯ, ಅದ್ಭುತ ಬಹುಮುಖಿ ಪ್ರತಿಭೆ ಮತ್ತು ಚಾತುರ್ಯವು ಭಾರತೀಯ ಚಿತ್ರರಂಗದ ಮೇಲೆ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ. ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ನೈಜತೆಯನ್ನು ತಂದಿದ್ದಾರೆ. ನಿಜಕ್ಕೂ ಅತ್ಯುನ್ನತ ಕಲಾವಿದರೊಬ್ಬರಿಗೆ ಸಂದ ಅತ್ಯಂತ ಸೂಕ್ತವಾದ ಗೌರವವಿದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಅಭಿನಂದಿಸಿದ್ದು, ಇದು ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಹಾಗೂ ಸಂತಸದ ಕ್ಷಣ ಎಂದಿದ್ದಾರೆ.







.
.
.
.
.
.
.
.
.
.
.
.
.
.
.
.
.
.
.
.
