
ಕಾರ್ಕಳ,ಜು.21: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಸಿಒಪಿಇ ಕ್ಲಬ್ ಮೂಲಕ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬAಧಿಸಿದ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ಗುರುತಿಸಿ ‘ಎಂಪವರ್- ಆದಿತ್ಯ ಬಿರ್ಲಾ ಎಜುಕೇಶನ್ ಟ್ರಸ್ಟ್’ ವತಿಯಿಂದ ಪ್ರತಿಷ್ಠಿತ ‘ಇನ್ನೋವೇಟಿವ್ ಮೆಂಟಲ್ ಹೆಲ್ತ್ ಅವಾರ್ಡ್- ವಿನ್ನರ್’ ಪ್ರಶಸ್ತಿಗೆ ಭಾಜನವಾಗಿದೆ.
ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಆರೋಗ್ಯಕರ, ಸುರಕ್ಷಿತ ಹಾಗೂ ಸಮನ್ವಯಯುತ ಕಲಿಕಾ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ ಮಹಾವಿದ್ಯಾಲಯವು ನಿರಂತರವಾಗಿ ನಡೆಸುತ್ತಿರುವ ಸಮಾಲೋಚನಾ ಸೇವೆಗಳು, ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ತಡೆಗಟ್ಟುವಿಕೆ ಕ್ರಮಗಳು ಹಾಗೂ ವಿದ್ಯಾರ್ಥಿಗಳ ಸಮಗ್ರ ಕ್ಷೇಮಾಭಿವೃದ್ಧಿಗೆ ಸಂಬAಧಿಸಿದ ವಿವಿಧ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಈ ಪ್ರಶಸ್ತಿ ಗುರುತಿಸಿದೆ.
ಇದೇ ಸಂದರ್ಭದಲ್ಲಿ, ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚಕರಾಗಿಯೂ ಹಾಗೂ ಎಂಪವರ್ನ ಪಾಯಿಂಟ್ ಆಫ್ ಕಾಂಟ್ಯಾಕ್ಟ್ ಆಗಿಯೂ ಕಾರ್ಯನಿರ್ವಹಿಸುತ್ತಿರುವ ಅಂಕಿತ್ ಎಸ್. ಕುಮಾರ್ ಅವರು 2025-26ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವುದು, ಸಹಾನುಭೂತಿ ಮತ್ತು ಮಾನಸಿಕ ಕ್ಷೇಮದ ಸಂಸ್ಕೃತಿಯನ್ನು ಬೆಳೆಸುವಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಪ್ರಶಂಸಾ ಪ್ರಮಾಣಪತ್ರವನ್ನೂ ಆದಿತ್ಯ ಬಿರ್ಲಾ ಎಜುಕೇಶನ್ ಟ್ರಸ್ಟ್ ನೀಡಿರುತ್ತದೆ.



.
.
.
.
.
.
.
.
.
.
.
.
.
.
.
.
.
.
.
.
