Share this news

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ತನ್ನ ಜತೆ ಪ್ರತಿಜ್ಞಾ ವಿಧಿ ಸ್ವೀಕರಿಸಿದ ತನ್ನ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.
ಸೋಮವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಆಗಮಿಸಿದರು. ಪ್ರಧಾನಿ ಕಾರ್ಯಾಲಯದ ಸಿಬ್ಬಂದಿಗಳು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮಧ್ಯಾಹ್ನ 3 ಗಂಟೆಗೆ ತನ್ನ ಸಂಪುಟ ಸಹೋದ್ಯೋಗಿಗಳ‌ ಜತೆ ಚೊಚ್ಚಲ ಸಂಪುಟ ಸಭೆ ನಡೆಸಿದರು.
ಖಾತೆಗಳ ಕುರಿತು ಹೇಳುವುದಾದರೆ,ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ತಮ್ಮ ಹಿಂದಿನ ಖಾತೆಗಳನ್ನು ಉಳಿಸಿಕೊಂಡಿದ್ದಾರೆ.ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಹಾಗೂ ಉಕ್ಕು, ಪ್ರಹ್ಲಾದ್ ಜೋಷಿ ಅವರಿಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ನೀಡುವ ಮೂಲಕ ಸಂಪುಟ ದರ್ಜೆಯ ಸಚಿವರಾಗಿ ಮೋದಿ ಸಂಪುಟ ಸೇರ್ಪಡೆಯಾಗಿದ್ದಾರೆ.
ಪ್ರಮಾಣವಚನ ಸಮಾರಂಭದ ಮರುದಿನ ಸಚಿವಾಲಯಗಳನ್ನು ಅನಾವರಣಗೊಳಿಸಲಾಯಿತು, ಎನ್‌ಡಿಎ ಬಣದ ಒಟ್ಟು 71 ಸಂಸದರು ಮಂತ್ರಿಮಂಡಲಕ್ಕೆ ಸೇರ್ಪಡೆಗೊಳ್ಳಲು ಪ್ರಮಾಣ ವಚನ ಸ್ವೀಕರಿಸಿದರು.

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *