Share this news
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಲ್ಲಿ ಶನಿವಾರ ಬಹಿರಂಗ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಜನತೆ ಸಂಕಷ್ಟದಲ್ಲಿ ಎದುರಿಸುತ್ತಿರುವಾಗ ಸರ್ಕಾರ ಲೂಟಿಯಲ್ಲಿ ತೊಡಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಜನತೆಗೆ ಕಾಂಗ್ರೆಸ್ ಬಗ್ಗೆ ಸತ್ಯ ಅರಿವಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿರುವ ಮೋದಿ, ಕಾಂಗ್ರೆಸ್ ಎಷ್ಟೇ ಬಾರಿ ತಮ್ಮ ಉಡುಪುಗಳನ್ನು ಬದಲಾಯಿಸಿದರೂ ಅವರ ದುಷ್ಕೃತ್ಯಗಳು ಬದಲಾಗುವುದಿಲ್ಲ, ಈ ಬಗ್ಗೆ ಜಾಗೃತರಾಗಿರುವ ಕರ್ನಾಟಕದ ಮಂದಿ ಕಾಂಗ್ರೆಸ್ ವರ್ತನೆಯಿಂದ ಆಕ್ರೋಶಗೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಲವು ಅವಕಾಶಗಳು ಸಿಕ್ಕಿದ್ದರೂ ಕಾಂಗ್ರೆಸ್ ಎಂದಿಗೂ ಸುಧಾರಣೆ ಮಾಡಿಕೊಳ್ಳುವುದಕ್ಕೆ ತಯಾರಿಲ್ಲ. ಸಮಾಜಘಾತುಕ ಶಕ್ತಿಗಳಿಗೆ ರಾಜ್ಯದಲ್ಲಿ ಬಹಿರಂಗವಾಗಿಯೇ ಬೆಂಬಲ ಸಿಗುತ್ತಿದೆ. ಜನರ ಮನಸ್ಸಿನಲ್ಲಿ ಭಯ ಉಂಟುಮಾಡಲಾಗುತ್ತಿದೆ. ಸಾರ್ವಜನಿಕರು ಜೀವಭಯದಿಂದ ಓಡಾಡುವಂತಾಗಿದ್ದು, ಜನರು ಆತಂಕಗೊಂಡಿರುವಾಗ ಸಂದರ್ಭದಲ್ಲಿ ಕಾಂಗ್ರೆಸ್ ಲೂಟಿಯಲ್ಲಿ ನಿರತವಾಗಿದೆ. ಕಲ್ಲಿದ್ದಲಿನ ಕಪ್ಪುತನವನ್ನು ಹೋಗಲಾಡಿಸಬಹುದು ಆದರೆ ಭ್ರಷ್ಟಾಚಾರವನ್ನು ಕಾಂಗ್ರೆಸ್‌ನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಂತಹವರಿಗೆ ಭ್ರಷ್ಟಾಚಾರವೇ ಆಮ್ಲಜನಕ ಎಂದು ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *