Share this news

ಬೆಂಗಳೂರು,ನ.13: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಒಂದು ದಿನದ ಭೇಟಿಗಾಗಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯದ 15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

ಬೆಳಿಗ್ಗೆ 10:10ಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಸಿಎಂ ಡಿಕೆ ಶಿವಕುಮಾರ್ ಸ್ವಾಗತ ಕೋರಿದರು. ರಾಜ್ಯಪಾಲರಾದ ಡಾ ಸುಧಾ ಯಾದವ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ,ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವು ರಾಜಕೀಯ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಪಿಂಕ್ ಲೈನ್, ವಂದೇ ಭಾರತ್ ರೈಲು ಸೇವೆಗೆ ಚಾಲನೆ ನೀಡುವುದು ಹಾಗೂ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರ್ ಅಭಿವೃದ್ಧಿಪಡಿಸಲಾದ ನಾಲ್ಕು ರೈಲು ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ಬೆಂಗಳೂರಿನ ಜಿಗಣಿ ಬಳಿಯಿರುವ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯಪಾಲೆ ಡಾ. ಸುಧಾ ಯಾದವ್, ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ನಮ್ಮ ಮೆಟ್ರೋದ ನೂತನ ಮಾರ್ಗ ತಾವರೆಕೆರೆಧಿ-ಕಾಳೇನ ಅಗ್ರಹಾರ ನಡುವಣ ಗುಲಾಬಿ ಮಾರ್ಗ (ಎಲಿವೇಟೆಡ್ ಕಾರಿಡಾರ್) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಹಸಿರು ನಿಶಾನೆ ತೋರಿ ಲೋಕಾರ್ಪಣೆಗೊಳಿಸಿದರು.

ಇದಲ್ಲದೆ, ಸುಮಾರು 4,450 ಕೋಟಿ ರೂಪಾಯಿ ಹೂಡಿಕೆಯಲ್ಲಿ ಅಭಿವೃದ್ಧಿಪಡಿಸಲಾದ ಕೊಪ್ಪಳ-II ಮತ್ತು ಗದಗ-II ನವೀಕರಿಸಬಹುದಾದ ಇಂಧನ ವಲಯಗಳ ವಿದ್ಯುತ್ ಏಕೀಕರಣ ಪ್ರಸರಣ ಯೋಜನೆಯನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಸುಮಾರು 1,370 ಕೋಟಿ ರೂಪಾಯಿ ಹೂಡಿಕೆಯಲ್ಲಿ ಅಭಿವೃದ್ಧಿಪಡಿಸಲಾದ ಬೀದರ್ ಸೌರಶಕ್ತಿ ವಲಯದ ವಿದ್ಯುತ್ ಪ್ರಸರಣ ಯೋಜನೆಯನ್ನೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ದಾವಣಗೆರೆ ಮತ್ತು ಬಳ್ಳಾರಿ ಪ್ರದೇಶಗಳಲ್ಲಿನ ಹೆಚ್ಚುವರಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಬಳಕೆಗೆ ಅನುಕೂಲವಾಗುವಂತೆ 1,100 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿದ್ಯುತ್ ಪ್ರಸರಣ ವ್ಯವಸ್ಥೆ ಬಲವರ್ಧನೆ ಯೋಜನೆಗೂ ಅಡಿಗಲ್ಲು ಹಾಕಲಿದ್ದಾರೆ. ಮಂಗಳೂರಿನಲ್ಲಿ z850 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಣಾ ಘಟಕವನ್ನು ಪ್ರಧಾನಿ ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 80,000 ಮೆಟ್ರಿಕ್ ಟನ್ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಈ ಘಟಕವು ದೇಶದ ಎಲ್‌ಪಿಜಿ ಸಂಗ್ರಹಣಾ ಮೂಲಸೌಕರ್ಯವನ್ನು ಗಣನೀಯವಾಗಿ ಬಲಪಡಿಸಲಿದೆ. ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ಬೆಂಗಳೂರಿನ ದೇವನಗುಂದಿ ಮಾರ್ಕೆಟಿಂಗ್ ಟರ್ಮಿನಲ್ ನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಬೆಂಗಳೂರಿನ ಹಾರಲಕುಂಟೆಯಲ್ಲಿ ಗೇಲ್  ಸಂಸ್ಥೆಯ ಸಂಕುಚಿತ ಜೈವಿಕ ಅನಿಲ (ಸಿಬಿಜಿ) ಘಟಕಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಘಟಕದಲ್ಲಿ ಪ್ರತಿದಿನ ಸುಮಾರು 300 ಟನ್ ನಗರ ಘನತ್ಯಾಜ್ಯವನ್ನು ಸಂಸ್ಕರಿಸಿ, 12.6 ಟನ್ ಶುದ್ಧ ಸಂಕುಚಿತ ಜೈವಿಕ ಅನಿಲವನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ.

 

 

 

 

 

 

 

 

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *