ಕಾರ್ಕಳ: ಕುಕ್ಕುಂದೂರು, ಸಾಣೂರು, ಇರ್ವತ್ತೂರು,ಕಾಂತಾವರ ಹಾಗೂ ದುರ್ಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸಂಬಂಧಿಸಿದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವು ಗುರುವಾರ ಕಾರ್ಕಳ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಬಳಿಕ ಫಲಾನುಭವಿಗಳಿಗೆ ಸರ್ಕಾರಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುಮಾರ್, ಆರ್, ತಾಲೂಕು ಪಂಚಾಯತಿ ಇ.ಓ ಶಶಿಧರ್, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು
