ಉಡುಪಿ : ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ, ಹಿಂದೂ ಕಾರ್ಯಕರ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸುವ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಉಡುಪಿಯಲ್ಲಿ ಸೋಮವಾರ ವಿವಿಧ ಹಿಂದೂ ಸಂಘಟನೆಗಳಿAದ ಪ್ರತಿಭಟನೆ ನಡೆಯಿತು.
ಇತ್ತೀಚಿಗೆ ಕಾರ್ಕಳ ತಾಲೂಕಿನ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವದಲ್ಲಿ, ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಟನೆಗಳು ಒತ್ತಾಯಿಸಿದ್ದವು. ಈ ಬೆಳವಣಿಗೆ ಗಮನಿಸಿದ ಜಿಲ್ಲಾ ಪೊಲೀಸ್ ಇಲಾಖೆ ಈ ಕುರಿತು ಜಾಗೃತಿ ಮೂಡಿಸುತ್ತಿದ್ದ ಹಿಂದೂ ಕಾರ್ಯಕರ್ತರನ್ನು ನಿಯಂತ್ರಿಸುವ ದೃಷ್ಟಿಯಿಂದ ಸುಮೋಟೋ ಕೇಸ್ ದಾಖಲಿಸಿತ್ತು. ಇದನ್ನು ಖಂಡಿಸಿ ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಎಂಬವರು ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡಿದ್ದರು. ಅವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ವಿರೋಧಿಸಿ ಹಿಂದು ಜಾಗರಣ ವೇದಿಕೆ ಉಡುಪಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು. ಉಡುಪಿ ಜಿಲ್ಲೆಯ ಎಲ್ಲಾ ಐದು ಮಂದಿ ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಕಿಡಿಕಾರಿದರು.
ಉಡುಪಿ ಜಿಲ್ಲೆಯಲ್ಲಿ ಖಾಕಿ ಹೋಗಿ ಕಾಂಗ್ರೆಸ್ ಆಗಿದೆ. ಹಿಂದೂ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ವಿರುದ್ಧ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು. ಹಿಂದೂ ದಮನನೀತಿ ಮುಂದುವರೆಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಹಿಂದೂ ಜಾತ್ರೆಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಆದ್ಯತೆ ನೀಡಬೇಕು, ಅಗತ್ಯಬಿದ್ದರೆ ಈ ವಿಚಾರವನ್ನು ಅಧಿವೇಶನದಲ್ಲೂ ಪ್ರಸ್ತಾವಿಸುವುದಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಾಸಕರು ಹೇಳಿದ್ದಾರೆ.
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.