Share this news

 

 

ಕಾರ್ಕಳ,ಫೆ.7: ಬೋಳ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಂಘದ ವತಿಯಿಂದ 13ನೇ ವರ್ಷದ ಸಾರ್ವಜನಿಕ ಶನಿಪೂಜೆಯು ಮಾರ್ಚ್ 7ರ ಶನಿವಾರದಂದು ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 9.30ಕ್ಕೆ ಗರಡಿಯ ಬೊಲ್ಯ ಶಾಂತಿ ಮರದ ಕಟ್ಟೆಯಲ್ಲಿ ಬೋಳ ಜಲಪಾದೆ ಕೃಷ್ಣಮೂರ್ತಿ ಆಚಾರ್ಯರ ನೇತೃತ್ವದಲ್ಲಿ ಹಾಗೂ ಗರಡಿ ಮನೆ ಹರೀಶ್ ಪೂಜಾರಿ ಅವರ ಮುಂದಾಳತ್ವದಲ್ಲಿ ದೈವಿಕ ಕಾರ್ಯಕ್ರಮ ಜರಗಲಿರುವುದು.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದ್ದು, ಬಳಿಕ 2 ಗಂಟೆಯಿಂದ ಶ್ರೀ ವಾಗ್ದೇವಿ ಯಕ್ಷಗಾನ ಕಲಾ ಮಂಡಳಿ, ಶ್ರೀ ಮೂಡು ಮಹಾಗಣಪತಿ ದೇವಸ್ಥಾನ ಬಂಡಿಮಠ ಕಾರ್ಕಳ ಇವರಿಂದ ಯಕ್ಷಗಾನ ತಾಳಮದ್ದಳೆ ” ಶ್ರೀ ಶನೀಶ್ವರ ಮಹಾತ್ಮೆ” ಪುಣ್ಯ ಕಥಾ ಭಾಗ ನಡೆಯಲಿದೆ.
ಈ ಎಲ್ಲಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಹವಹಿಸಬೇಕೆಂದು ಸಂಘದ ಅಧ್ಯಕ್ಷರಾದ ಸಂದೀಪ್ ಬಿ. ಹಾಗೂ ಸರ್ವ ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *