Share this news

ಕಾರ್ಕಳ, ಜು.19: ಎಲ್ಲಾ ಮಾಹಿತಿಯನ್ನು ಚಾಟ್ ಜಿಪಿಟಿ, ಗೂಗಲ್ ಕೊಡುತ್ತದೆ ಎನ್ನುವ ಭ್ರಮೆಯಿಂದ ಯುವಜನತೆ ಹೊರಬರಬೇಕು. ಚಾಟ್ ಜಿಪಿಟಿ, ಗೂಗಲ್ ಮಾಹಿತಿ, ಸಾರಾಂಶ ಕೊಡಬಹುದು ಆದರೆ ಬಾಂಧವ್ಯವನ್ನು ಕೇವಲ ಪುಸ್ತಕಗಳಿಂದ ಮಾತ್ರ ಪಡೆಯಲು ಸಾಧ್ಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಭಾನುವಾರ ನಡೆದ ಕ್ರಿಯೇಟಿವ್ ಪುಸ್ತಕ ಮನೆ ಪ್ರಯೋಜಕತ್ವದಲ್ಲಿ ನಡೆದ ಪುಸ್ತಕಧಾರೆ ಕಾರ್ಯಕ್ರಮದಲ್ಲಿ 25 ಹೊಸ ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ತಂತ್ರಜ್ಞಾನದ ಯುಗದಲ್ಲಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಗ್ರಂಥಾಲಯಗಳ ಸಂಖ್ಯೆ ಕಡಿಮೆಯಾಗುತ್ತಿವೆ ಮೊಬೈಲ್ ಹಾವಳಿ ಹೆಚ್ಚಾಗುತ್ತಿವೆ ಎನ್ನುವ ಮಾತಿನ ನಡುವೆ ಇಂದು ಕ್ರಿಯೇಟಿವ್ ಕಾಲೇಜು ಆವರಣದಲ್ಲಿ 25 ಪುಸ್ತಕಗಳು ಏಕಕಾಲದಲ್ಲಿ ಬಿಡುಗಡೆಯಾಗಿದ್ದು, ಈ ಎಲ್ಲಾ ಅಪಸ್ವರಗಳನ್ನು ನೀಗಿಸಿದೆ. ಇಂದು ಬಿಡುಗೆಯಾದ ಪುಸ್ತಕಗಳು ಶಾಶ್ವತ ಪುಸ್ತಕಗಳಾಗಿ ಸಮಾಜದಲ್ಲಿ ಉಳಿಯೇಕು ಆ ಮೂಲಕ ಸಮಾಜಕ್ಕೆ ದಾರಿದೀಪವಾಗಬೇಕಿದೆ ಎಂದರು. ಈ ನಿಟ್ಟಿನಲ್ಲಿ ಯುವಜನತೆ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಮುಖ್ಯ ಅತಿಥಿಯಾಗಿ ಮಾತನಾಡಿ,ಪುಸ್ತಕ ಓದುವ ಹವ್ಯಾಸ ಜ್ಞಾನ, ಹೊಸ ವಿಚಾರ ಹಾಗೂ ಮನರಂಜನೆ ಪಡೆಯುವ ಇರುವ ಪುರಾತನ ಮಾರ್ಗವಾಗಿದೆ. ಆದರೆ ಇಂದು ಮೊಬೈಲ್ ತಂತ್ರಜ್ಞಾನ ಸ್ವಲ್ಪಮಟ್ಟಿನ ಓದುಗರು ಕಡಿಮೆಯಾಗಿದೆ. ಮೊಬೈಲ್ ಬಿಡಿ ಪುಸ್ತಕ ಹಿಡಿ ಎನ್ನುವುದು ತಪ್ಪು. ಅದು ಹಿತಮಿತವಾಗಿ ಬಳಸಬೇಕು. ಮೊಬೈಲ್ ಎನ್ನುವುದು ಬೆಂಕಿಪೊಟ್ಟಣ ಇದ್ದಂತೆ ಅದರಿಂದ ದೀಪವನ್ನು ಉರಿಸಬಹುದು ಅದೇ ಪೊಟ್ಟಣದಿಂದ ಬೆಂಕಿಯನ್ನು ಕೂಡ ಹಚ್ಚಬಹುದು ಅದನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದು ಮುಖ್ಯ. ನಮಗೆ ಸಿಕ್ಕ ಸ್ವಾಂತ್ರö್ಯವನ್ನು ಹೇಗೆ ಬಳಸಬೇಕು ಎಂದು ತಿಳಿಸಿಕೊಡುವುದು ಶಿಕ್ಷಣ. ಸಿಕ್ಕಿರುವ ಸ್ವಾತಂತ್ರö್ಯವನ್ನು ಸಮರ್ಪಕವಾಗಿ ಬಳಸಿಕೊಂಡಾಗ ಜೀವನಲ್ಲಿ ನೀವು ಗೆದ್ದಂತೆ ಎಂದು ಅವರು ಹೇಳಿದರು.

ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಶ್ವಥ್ ಎಸ್. ಎಲ್.ಮಾತನಾಡಿ, ಕಳೆದ ಮೂರು ವರ್ಷಗಳಿಂದ ಕ್ರಿಯೇಟಿವ್ ಪುಸ್ತಕ ಮನೆ ಕನ್ನಡ ಸಾಹಿತ್ಯದ ಶ್ರೇಷ್ಠ ಕೃತಿಗಳನ್ನು ಪ್ರಕಟಿಸುವುದರ ಜೊತೆಗೆ ನಾಡಿನ ಹೆಸರಾಂತ ಬರಹಗಾರರು, ಚಿಂತಕರು ಹಾಗೂ ಸಾಹಿತ್ಯಾಸಕ್ತರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವದ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಅದರ ಮುಂದುವರಿದ ಭಾಗವಾಗಿ ಈ ವರ್ಷದ ಮೂರನೇ ಆವೃತ್ತಿಯ “ಕ್ರಿಯೇಟಿವ್ ಪುಸ್ತಕ ಧಾರೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯಮಟ್ಟದ ಕ್ರಿಯೇಟಿವ್ ಪುಸ್ತಕ ಪ್ರಶಸ್ತಿಯನ್ನು ಕುಂದಾಪುರದ ಲೇಖಕ ಶಶಿಧರ ಹಾಲಾಡಿ ಅವರ “ನದಿದಾಟಿ ಬಂದವರು” ಕೃತಿಗೆ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ್ ರಾವ್, ಮಂಗಳೂರು ವಿ.ವಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ ಮಾತನಾಡಿದರು. ಕ ಸಾ ಪ ಕಾರ್ಕಳ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕಕರುಗಳಾದ ವಿದ್ವಾನ್ ಗಣಪತಿ ಭಟ್, ಡಾ ಗಣನಾಥ್ ಭಟ್, ಅಮೃತ್ ರೈ, ಆದರ್ಶ ಎಂ ಕೆ, ವಿಮಲ್ ರಾಜ್, ಗಣಪತಿ ಕೆ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಬರಹಗಾರರು ಹಾಗೂ ಸಾಹಿತ್ಯಾಭಿಮಾನಿಗಳು ಉಪಸ್ಥಿತರಿದ್ದರು.

 

 

   

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *