Share this news

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು ಗ್ರಾಮದ ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿದ್ದು, ತಿಂಗಳ ಹಿಂದೆ ನಾಪತ್ತೆಯಾಗಿದ್ದ ನಳಿನಿ ಎಂಬವರದ್ದು ಎಂದು ಗುರುತಿಸಲಾಗಿದೆ.

ಮಹಿಳೆಯ ತಲೆಗೂದಲು ನೇಣುಕುಣಿಕೆಯಲ್ಲಿ ಜೋತಾಡುತ್ತಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರನ್ನು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ ನಳಿನಿ ಕಳೆದ ಒಂದು ತಿಂಗಳಿAದ ಮನೆಯಿಂದ ನಾಪತ್ತೆಯಾಗಿದ್ದರು. ಪತ್ನಿ ನಾಪತ್ತೆ ಕುರಿತು ಸಂಜೀವ ಅಕ್ಟೋಬರ್ 8ರಂದು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆ ವಿಷಯ ತಿಳಿದ ನಳಿನಿ ತವರು ಮನೆಯವರೂ ಹುಡುಕಾಟ ನಡೆಸಿದ್ದಾರೆ. ಉರ್ವದ ಸಂಜೀವರವರ ಮನೆಯ ಸುತ್ತಮುತ್ತ ಹುಡುಕಾಡಿದ್ದಾರೆ.

ಈ ವೇಳೆ ಮನೆಯ ಎದುರಿನ ಗುಡ್ಡದ ತುದಿಯಲ್ಲಿ ನಳಿನಿ ಮೃತದೇಹದ ಅವಶೇಷ ಪತ್ತೆಯಾಗಿದೆ. ಮರವೊಂದಕ್ಕೆ ನೇಣಿನ ಹಗ್ಗದಲ್ಲಿ ತಲೆ ಕೂದಲು ಜೋತಾಡುತ್ತಿತ್ತು. ಹಗ್ಗದ ಕೆಳಗೆ ತಲೆ ಬುರುಡೆ ಹಾಗೂ ಕೈ ಮತ್ತು ಕಾಲಿನ ಎಲುಬುಗಳು ಪತ್ತೆಯಾಗಿವೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *