ಬೆಂಗಳೂರು: ರಾಜ್ಯದಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರದಿಂದ (ಏ.3) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ.
ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.