
ಬೆಂಗಳೂರು, ನವೆಂಬರ್ 21: ಹವಾಮಾನ ಇಲಾಖೆ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
