ಕಾರ್ಕಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹಿರಿಯರ ನಾಣ್ನುಡಿಯಂತೆ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಆಸ್ತಿಯನ್ನಾಗಿಸಿ ಎನ್ನುವ ಮಾತು ಇಂದು ಅಕ್ಷರಶಃ ನಿಜವಾಗಿದೆ. ಮಕ್ಕಳು ಚೆನ್ನಾಗಿ ಓದಿ ಅತ್ಯುನ್ನತ ಹುದ್ದೆಗೇರಿದಾಗ ಕಲಿತ ಶಾಲೆ, ಕಲಿಸಿದ ಗುರು ಹಾಗೂ ಪೋಷಕರಿಗೆ ಅದಕ್ಕಿಂತ ಹೆಚ್ಚಿನ ಖುಷಿ ಇನ್ನೆಲ್ಲೂ ಸಿಗಲು ಸಾಧ್ಯವಿಲ್ಲ. ತೀರಾ ಗ್ರಾಮೀಣ ಭಾಗದ ಪ್ರಶಾಂತ ವಾತಾವರಣದ ನಡುವೆ ಶಾಲೆಯೊಂದನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಕನಸು ಕಂಡ ಸಾಣೂರಿನ ರಾಜೇಶ್ವರಿ ಎಜ್ಯುಕೇಶನ್ ಫೌಂಡೇಶನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿಯವರ ಕನಸು ಇಂದು ನನಸಾಗುತ್ತಿದೆ. ಇದರ ಫಲವಾಗಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನ ಪಟೇಲ ಮುದ್ದಣ ಶೆಟ್ಟಿ ಕ್ಯಾಂಪನ್ ನ ಪ್ರಶಾಂತ ವಾತಾವರಣದಲ್ಲಿ ತಲೆಯೆತ್ತಿರುವ ವಿದ್ಯಾ ದೇಗುಲ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿಯು ಕಾಲೇಜು ಏಪ್ರಿಲ್ 13ರಂದು ಭಾನುವಾರ ಲೋಕಾರ್ಪಣೆಯಾಗಲಿದೆ.
ಫಲಿತಾಂಶದ ವಿಚಾರದಲ್ಲಿ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಇಂದಿಗೂ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದು ಇದು ಗುಣಮಟ್ಟದ ಶಿಕ್ಷಣದಿಂದ ಸಾಧ್ಯವಾಗಿದೆ. ಮಕ್ಕಳಿಗೆ ಅತ್ಯುತ್ತಮ ವಸತಿ ಸೌಲಭ್ಯದ ಜತೆಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹದಾಸೆಯಿಂದ ಕಾರ್ಕಳದ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿಯು ಕಾಲೇಜು ಜನ್ಮತಳೆದಿದ್ದು, ಈಗಾಗಲೇ ರಾಜ್ಯದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದ ಜತೆಗೆ ಜೀವನದ ಮೌಲ್ಯಗಳು, ವ್ಯಕ್ತಿತ್ವ ವಿಕಸನ, ವಿಶೇಷವಾಗಿ ಇಂಗ್ಲೀಷ್ ಹಾಗೂ ಗಣಿತ ಭಾಷೆಗಳಲ್ಲಿ ಹಿಡಿತ ಸಾಧಿಸಲು ಬೇಕಾದ ಎಲ್ಲಾ ತರಬೇತಿಯನ್ನು ನುರಿತ ಶಿಕ್ಷಕರಿಂದ ನೀಡಲಾಗುತ್ತದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್,ಜೆಇಇ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾನಸಿಕವಾಗಿ ಸಿದ್ಧರಾಗಲು ಅನುಭವಿ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ. ಇದರ ಜತೆಗೆ ಕಲಿಕೆಗೆ ಪೂರಕವಾಗಿ ಅತ್ಯಾಧುನಿಕ ಸೌಲಭ್ಯವುಳ್ಳ ವಿಜ್ಞಾನ ಹಾಗೂ ಕಂಪ್ಯೂಟರ್ ಲ್ಯಾಬ್ , 800 ಮಂದಿ ಕುಳಿತುಕೊಳ್ಳುವ ವಿಶಾಲವಾದ ಸಭಾಂಗಣ, ಯೋಗ , ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಆಂಫಿಥಿಯೇಟರ್ ಸೌಲಭ್ಯ ಕಲ್ಪಿಸಲಾಗಿದೆ.
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನುರಿತ ಬೋಧಕ ವೃಂದ
ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಉತ್ತಮ ಬೋಧಕ ವೃಂದದ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದೆ. ಮಾತ್ರವಲ್ಲದೇ ಪ್ರತೀ ವಿದ್ಯಾರ್ಥಿಯ ಪಠ್ಯ ಚಟುವಟಿಕೆಗಳ ಬಗ್ಗೆ ವಿಶೇಷ ನಿಗಾ ಇರಿಸಲಾಗುತ್ತದೆ. ಕಲಿಕೆಯ ಜತೆ ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದ್ದು, ಮಕ್ಕಳಿಗೆ ಹಾಲು, ಹಣ್ಣು,ಮೊಟ್ಟೆ ಮುಂತಾದ ಪುಷ್ಟಿದಾಯಕ ಆಹಾರ ಹಾಗೂಪ್ರತ್ಯೇಕ ಪಾಕಶಾಲೆಗಳಲ್ಲಿ ಸಸ್ಯಾಹಾರ ,ಮಾಂಸಹಾರ ಖಾದ್ಯಗಳನ್ನು ಸಿದ್ಧಪಡಿಸಿ ನಿಗದಿತ ದಿನಗಳಲ್ಲಿ ನೀಡಲಾಗುತ್ತದೆ.
ಸುಜ್ಜಸಜ್ಜಿತ ಮೂಲಸೌಕರ್ಯ
ಶಿಕ್ಷಣದ ಜತೆಜತೆಗೆ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೆ ಸುಮಾರು 3 ಎಕರೆ ಜಾಗದಲ್ಲಿ ಸುಸಜ್ಜಿತ ಕ್ರಿಡಾಂಗಣದ ವ್ಯವಸ್ಥೆ ಮಾಡಲಾಗಿದ್ದು, ವಾಲಿಬಾಲ್, ಫುಟ್ಬಾಲ್, ಕಬಡ್ಡಿ,ಬ್ಯಾಡ್ಮಿಂಟನ್, ಕ್ರಿಕೆಟ್ ಮುಂತಾದ ಶಾರೀರಿಕ ವ್ಯಾಯಾವ ಹಾಗೂ ಮನಸ್ಸಿನ ಆರೋಗ್ಯ ವೃದ್ಧಿಸುವ ಕ್ರೀಡೆಗಳ ಅವಕಾಶ ಕಲ್ಪಿಸಲಾಗಿದೆ.ಇದಲ್ಲದೇ ವಿಶೇಷವಾಗಿ ಮಕ್ಕಳಿಗೆ ಈಜುಕೊಳದ ವ್ಯವಸ್ಥೆಯಿದ್ದು ನುರಿತ ತಜ್ಞರಿಂದ ಈಜು ತರಬೇತಿ ನೀಡಲಾಗುತ್ತದೆ. ಮಕ್ಕಳಿಗೆ ಪಠ್ಯದ ಜತೆಗೆ ಯೋಗ, ನೃತ್ಯ ಹಾಗೂ ಸಂಗೀತ ತರಗತಿಗಳನ್ನು ನಡೆಸಲಾಗುತ್ತಿದ್ದು ಇದರಲ್ಲಿ ಬಾಗವಹಿಸುವುದು ಕಡ್ಡಾಯವಾಗಿರುತ್ತದೆ. ಸಮಾಜದ ವಿವಿಧ ರಂಗಗಳ ಸಂಪನ್ಮೂಲ ವ್ಯಕ್ತಿಗಳ ಜತೆ ವಿಶೇಷ ಸಂವಾದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ವಿಶೇಷವಾಗಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಪ್ರವೇಶ ಶುಲ್ಕದಲ್ಲಿ ಶೇ.20 ರಿಂದ ಶೇ 50ರಷ್ಟು ವಿಶೇಷ ರಿಯಾಯಿತಿ!
ಮೊದಲ ವರ್ಷದ ಪ್ರವೇಶ ಶುಲ್ಕ ರಿಯಾಯಿತಿ ನೀಡಲಾಗುತ್ತಿದ್ದು, ಪ್ರಥಮ ಪಿಯು ಗೆ ದಾಖಲಾಗುವ 85 ಶೇ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶೇ 20 ಶುಲ್ಕ ವಿನಾಯಿತಿ ಹಾಗೂ ಶೇ 90ಕ್ಕೂ ಮಿಕ್ಕಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶೇ 40 ರಷ್ಟು ರಿಯಾಯಿತಿ, ಶೇ.95ಕ್ಕೂ ಮಿಕ್ಕಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶೇ .50 ರಷ್ಟು ಶುಲ್ಕ ರಿಯಾಯಿತಿ ಕಲ್ಪಿಸಲಾಗಿದೆ. ಈಗಾಗಲೇ ಬಹುತೇಕ ಸೀಟುಗಳು ಭರ್ತಿಯಾಗುತ್ತಿದ್ದು, ಇನ್ನು ಕೆಲವೇ ಸೀಟುಗಳು ಲಭ್ಯವಿದೆ.
ಏಪ್ರಿಲ್ 13 ರಂದು ಉದ್ಘಾಟನಾ ಸಮಾರಂಭ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಮುದ್ದಣ್ಣ ಶೆಟ್ಟಿ ಕ್ಯಾಂಪಸ್ ನಲ್ಲಿ ಏ 13ರಂದು ಭಾನುವಾರ ಸಂಜೆ 5.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ ಮೂಡುಬಿದಿರೆ, ಧನಲಕ್ಷ್ಮೀ ಎಕ್ಸ್‌ಪೋರ್ಟ್ ನ ಮಾಲಕ ಕೆ. ಶ್ರೀಪತಿ ಭಟ್, ಜ್ಞಾನಸುಧಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ. ಲಿಮಿಟೆಡ್‌ನ ಎಂ.ಡಿ. ಜಿ. ರಾಮಕೃಷ್ಣ ಆಚಾರ್, ಸಾಣೂರು ಗ್ರಾ.ಪಂ. ಅಧ್ಯಕ್ಷ ಯುವರಾಜ್ ಜೈನ್, ಪುತ್ತೂರು ಸಚಿನ್ ಎಂಟರ್‌ಪ್ರೈಸಸ್‌ನ ಮಾಲಕ ಮಂಜುನಾಥ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ರಾಜೇಶ್ವರಿ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ವೇತಾ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.