ಬೆಂಗಳೂರು : ಕುಂದಲಹಳ್ಳಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಿಗೆ ಕೋರ್ಟ್ 10 ದಿನಗಳವರೆಗೆ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.
ಪಶ್ಚಿಮ ಬಂಗಾಲದಲ್ಲಿ ಎನ್ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಅರೋಪಿಗಳನ್ನು ಬಂಧಿಸಿದ್ದು, ಅವರನ್ನು ಶನಿವಾರ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ 10 ದಿನ ಎನ್ ಐಎ ಕಸ್ಟಡಿಗೆ ನೀಡಿದೆ.
ಬಂಧಿತ ಉಗ್ರರನ್ನು ಇಂದು ಎನ್ಐಎ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಉಗ್ರರಾದ ಮುಸಾವಿರ್, ಅಬ್ದುಲ್ ಮತೀನ್ ರನ್ನು ಕೋರಮಂಗಲದಲ್ಲಿರುವ ರಾಷ್ಟ್ರೀಯ ಕ್ರೀಡಾ ಗಾಮದಲ್ಲಿರುವ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಉಗ್ರರನ್ನು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ ಮತ್ತು ಅಬ್ದುಲ್ ಮತೀನ್ ತಾಹಾ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಭಯೋತ್ಪಾದನಾ ವಿರೋಧಿ ಸಂಸ್ಥೆ ತಿಳಿಸಿದೆ.










