ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು(ಜುಲೈ 25) ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ಕಳೆದ 14 ತಿಂಗಳುಗಳಿಂದ ಪ್ರಜ್ವಲ್ ರೇವಣ್ಣ ಅವರು ಜೈಲಿನಲ್ಲಿದ್ದಾರೆ. ಹೀಗಾಗಿ ಬೇಲ್ಗಾಗಿ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಬೇಲ್ ನೀಡಿಲ್ಲ. ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.