
ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವೀಡಿಯೋ ವೈರಲ್ ಆದ ಬೆನ್ನಲ್ಲೇ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ರಾಮಚಂದ್ರ ರಾವ್ ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆಗಿದ್ದು, ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮಚಂದ್ರ ರಾವ್ ವಿರುದ್ಧ ಕೆಂಡಾಮಂಡಲರಾಗಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಿದ್ದರು.
ಈ ನಡುವೆ ಗೃಹಸಚಿರನ್ನು ಭೇಟಿಯಾಗಲು ಬಂದಿದ್ದ ಡಿಜಿಪಿ ರಾಮಚಂದ್ರ ರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇದು ಎಐ ಸೃಷ್ಟಿ ಮತ್ತು ತಮ್ಮ ವಿರುದ್ಧದ ಷಡ್ಯಂತ್ರ ಎಂದು ಸ್ಪಷ್ಟೀಕರಣ ನೀಡಿದ್ದರು. ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ.

.
.
.
.
