ಕಾರ್ಕಳ, ಅ.14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳದ ರವಿಶಂಕರ್ ಶೇರಿಗಾರ್ ಅವರನ್ನು ನೇಮಕ ಮಾಡಲಾಗಿದೆ.
ರವಿಶಂಕರ್ ಶೇರಿಗಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಕಳೆದ 2013ರಿಂದ 2018ರವರೆಗೆ ಭಾರತೀಯ ನೈರುತ್ಯ ರೈಲ್ವೆಯ ಸಲಹಾ ಸಮಿತಿ ಸದಸ್ಯರಾಗಿ 2017ರ ಗೋವಾ ರಾಜ್ಯದ ಪೋಂಡ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಎಐಸಿಸಿಯಿಂದ ನೇಮಕಗೊಂಡು ಪಕ್ಷದ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೇ ಈ ಹಿಂದೆ ಕೆಪಿಸಿಸಿ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದ್ದಾರೆ.