Share this news

ಬೆಂಗಳೂರು : ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ‌ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಈ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಈ ವಿಷಯದ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಭಾರತ ಸರ್ಕಾರದ ಪಾಲನ್ನು ನಗರ ಪ್ರದೇಶದಲ್ಲಿ ₹ 1.5 ರಿಂದ ₹ 5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ₹ 1.2 ರಿಂದ ₹ 3 ಲಕ್ಷಕ್ಕೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಎಸ್ಪಿ ಪ್ಯಾಕೇಜ್ ಅನ್ನು ಘೋಷಿಸಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಳ,
ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಭಾರತ ಸರ್ಕಾರದ ಪಾಲನ್ನು ನಗರ ಪ್ರದೇಶದಲ್ಲಿ ₹ 1.5 ರಿಂದ ₹ 5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ₹ 1.2 ರಿಂದ ₹ 3 ಲಕ್ಷಕ್ಕೆ ಹೆಚ್ಚಳ ಹಾಗೂ ರಾಯಚೂರಿಗೆ AIIMS ಘೋಷಿಸಬೇಕೆಂದು ಸಿಎಂ ಸಿದ್ದ ರಾಮಯ್ಯನವರ ಸಹಿಯೊಂದಿಗೆ ವಿವರವಾದ ಟಿಪ್ಪಣಿಯನ್ನು ಇರಿಸಲಾಗಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.

 

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *