Share this news

ಬೆಂಗಳೂರು, ಏ.11: ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು. ಅದರಂತೆ ಇದೀಗ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಳೆಯ ನಿಮಯದ ಪ್ರಕಾರ, 2020 ಮೇ 31ರೊಳಗೆ ಜನಿಸಿದ ಮಕ್ಕಳಿಗೆ ಮಾತ್ರ ಪ್ರಸಕ್ತ ಸಾಲಿನಲ್ಲಿ 1 ನೇ ತರಗತಿಗೆ ಅವಕಾಶವಿತ್ತು. ಹೊಸ ನಿಯಮದ ಪ್ರಕಾರ, 2020 ಜುಲೈ 30 ವರೊಳಗೆ ಜನಿಸಿದ ಮಕ್ಕಳಿಗೂ ದಾಖಲಾತಿ ಸಿಗಲಿದೆ. ಇದಕ್ಕೆ ಸಂಬಂಧಿಸಿದಂತೆ SATS ತಂತ್ರಾಂಶದಲ್ಲಿಯೂ ಸೂಕ್ತ ಬದಲಾವಣೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

2022 ರಿಂದಲೇ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು ಎಂಬ ನಿಯಮ ಜಾರಿಗೆ ತಂದಿದ್ದರೂ, ಸೂಕ್ತವಾಗಿ ಜಾರಿಯಾಗಿಲ್ಲ. ಪ್ರತಿ ವರ್ಷ ಪೋಷಕರು ಮಕ್ಕಳನ್ನು 3 ವರ್ಷ ಒಳಗೆ ನರ್ಸರಿಗೆ, 4 ವರ್ಷ ಪೂರ್ಣಗೊಳ್ಳುವ ಮುನ್ನವೇ ಎಲ್‌ಕೆಜಿಗೆ, 5 ವರ್ಷಕ್ಕೂ ಮುನ್ನ ಯುಕೆಜಿಗೆ ಸೇರಿಸುತ್ತಿದ್ದಾರೆ. ಅಂತಹ ಮಕ್ಕಳು 1 ನೇ ತರಗತಿಗೆ ದಾಖಲಾಗುವ ಸಂದರ್ಭದಲ್ಲಿ ನಿಯಮದಂತೆ ವಯಸ್ಸು ಪೂರ್ಣಗೊಂಡಿಲ್ಲವೆಂದು ಮತ್ತೆ ಯುಕೆಜಿ ಪುನರಾವರ್ತನೆ ಮಾಡಲಾಗುತ್ತಿತ್ತು. ಈ ವರ್ಷವೂ ರಾಜ್ಯಾದ್ಯಂತ 5 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಈ ಸಮಸ್ಯೆ ಎದುರಾಗಿತ್ತು ಎನ್ನಲಾಗಿದೆ. ಸದ್ಯ ಸರ್ಕಾರದ ವಿನಾಯಿತಿಯಿಂದ ಅನುಕೂಲವಾಗಿದೆ.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *