Share this news

ಬೆಂಗಳೂರು,ಸೆ 08 : ನಾಗರಿಕ ಸೇವೆಗಳಲ್ಲಿನ ಬಿ ಮತ್ತು ಸಿ ಗ್ರೂಪ್ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ssಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿರುತ್ತದೆ.
ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ. ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು. ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬAಧಿಸಿದAತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *