ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಇದರಿಂದ ಸಿಎಂಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆ ಪೂರ್ಣಗೊಳ್ಳಲಿದ್ದು, ಈ ಮೂಲಕ ಈ ಕೇಸ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.
ಮುಡಾ ಹಗರಣ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷಕ್ಕೆ ಸಂಬAಧಿಸಿ ಹೈಕೋರ್ಟ್ನಲ್ಲಿ ಇಂದು ಕೂಡಾ ದೀರ್ಘ ವಿಚಾರಣೆ ನಡೆಯಿತು. ಸಿಎಂ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಮಂಡಿಸಿದ ಸುದೀರ್ಘ ವಾದದ ಬಳಿಕ ಇಂದು ದೂರುದಾರ ಸ್ನೇಹಮಯಿ ಕೃಷ್ಣ ಪರ ಕೆ.ಜಿ.ರಾಘವನ್ ವಾದಮಂಡಿಸಿದರು.