ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿನೋಟಿಫೈ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊAದೆಡೆ ಮುಡಾ ಹಗರಣ ಸಂಬAಧ (ಇಡಿ) ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಜೊತೆಗೆ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಹೀಗಾಗಿ ಪ್ರಕರಣದ ಕುರಿತ ಕುತೂಹಲ ಇದೀಗ ಮತ್ತಷ್ಟು ಹೆಚ್ಚಾಗಿದೆ.