Share this news

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಪರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ.ಇವರಲ್ಲದೇ ಉಳಿದ ಆರೋಪಿಗಳಾದ ನಾಗರಾಜು, ಅನುಕುಮಾರ್,ಲಕ್ಷಣ್, ಜಗದೀಶ್ ಹಾಗೂ ಪ್ರದೋಶ್ ಗೆ ಜಾಮೀನು ಮಂಜೂರಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೂನ್ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ ಅವರಿಗೆ ಅಧಿಕೃತವಾಗಿ ಜಾಮೀನು ಮಂಜೂರಾಗಿದ್ದು ಇದರಿಂದ ದಾಸ ನಿರಾಳರಾಗಿದ್ದಾರೆ.

ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ರೇಣುಕಾ ಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್?ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಈ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಕೂಡ ಬಿಡುಗಡೆಯಾಗಲಿದ್ದು ಸೋಮವಾರ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.

 

 

 

 

Leave a Reply

Your email address will not be published. Required fields are marked *