ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕರಾವಳಿಯ ಎಲ್ಲಾ ಶಾಸಕರು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ರವರನ್ನು ಭೇಟಿಯಾಗಿ ಚರ್ಚಿಸಿದರು.
ಈ ವಿಲೀನಕ್ಕೆ ಈಗಾಗಲೇ ಗೋವಾ ಸರ್ಕಾರವು ಒಪ್ಪಿಗೆ ನೀಡಿದ್ದು,ಕರ್ನಾಟಕ ಸರ್ಕಾರವು ಕೂಡ ವಿಲೀನಕ್ಕೆ ಒಪ್ಪಿಗೆ ನೀಡುವಂತೆ ಸಂಸದರು ಹಾಗೂ ಶಾಸಕರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು
K