Share this news

ಬೆಂಗಳೂರು: ಆನ್‌ಲೈನ್ ಗೇಮಿಂಗ್ ನಿಯಂತ್ರಣ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ “ಸುರಾಜ್ಯ ಅಭಿಯಾನ” ಸಂಘಟನೆಯ ಪ್ರತಿನಿಧಿ ತಂಡದ ಸದಸ್ಯರು ರಾಜ್ಯ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕಳೆದ 3 ವರ್ಷಗಳಲ್ಲಿ ಆನ್‌ಲೈನ್ ಜೂಜಾಟದ ಕಾರಣ 18 ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದ್ದರಿಂದ ತಕ್ಷಣ ಕರ್ನಾಟಕ ಪೊಲೀಸ್ ತಿದ್ದುಪಡಿ ಮಸೂದೆ 2025 ಅನ್ನು ಅಂಗೀಕರಿಸಬೇಕು. Addictive gaming helpline ಮತ್ತು ಶಾಲಾ ಪಠ್ಯದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸೇರಿಸಬೇಕು. ಅಕ್ರಮ ಜೂಜಾಟದ ಪ್ಲಾಟ್‌ಫಾರ್ಮ್‌ಗಳಿಗೆ ಜಾಹೀರಾತು ನೀಡುವ ಸೆಲೆಬ್ರಿಟಿಗಳು/ಇನ್ಫ್ಲುಯೆನ್ಸರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂವಿಧಾನದ ಆರ್ಟಿಕಲ್ 252 ಅಡಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ “ಸುರಾಜ್ಯ ಅಭಿಯಾನ” ಕರ್ನಾಟಕ ರಾಜ್ಯ ಸಂಯೋಜಕರಾದ ಮೋಹನ್ ಗೌಡ, ವೆಂಕಟೇಶಮೂರ್ತಿ ಎಚ್. ಎಸ್., ಶ್ರೀಶೈಲ ಮತ್ತಿತರರು ಉಪಸ್ಥಿತರಿದ್ದರು.

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *