
ಕಾರ್ಕಳ,ಮಾ.18: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿನ ಜಿಲ್ಲಾ ಮುಖ್ಯ ರಸ್ತೆಗಳಿಗೆ 3 ಸಂಪರ್ಕ ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಒಟ್ಟು 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ಕಾರ್ಕಳದ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಪ್ರಮುಖ ಸೇತುವೆಗಳ ಮರು ನಿರ್ಮಾಣದ ಪೈಕಿ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ನಕ್ರೆ ರಂಗನಪಲ್ಕೆ ಜಿಲ್ಲಾ ಮುಖ್ಯರಸ್ತೆಯ ಪರಪು ಎಂಬಲ್ಲಿ ಸೇತುವೆಯ ಮರು ನಿರ್ಮಾಣ ಕಾಮಗಾರಿ, ರೆಂಜಾಳ ನೆಲ್ಲಿಕಾರು ಜಿಲ್ಲಾ ಮುಖ್ಯರಸ್ತೆಯ ರೆಂಜಾಳ ಗ್ರಾಮ ಪಂಚಾಯತ್ ಬಳಿ ಸೇತುವೆಯ ಮರು ನಿರ್ಮಾಣ ಹಾಗೂ ಬೋಳ ಗ್ರಾಮದ ಮೃತ್ಯುಂಜಯ ಸ್ವಾಮಿ ದೇವಸ್ಥಾನದ ಬಳಿ ಸೇತುವೆ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿರುತ್ತದೆ.
ಸಾರ್ವಜನಿಕರ ಹಾಗೂ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದೀಗ 3 ಸೇತುವೆಗಳ ಅಭಿವೃದ್ಧಿಗೆ 4.50 ಕೋಟಿ ರೂ ಅನುದಾನ ಮಂಜೂರಾಗಿ ಸೇತುವೆಗಳ ಮರು ನಿರ್ಮಾಣ ಕಾರ್ಯಕ್ಕೆ ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿದ ಬಳಿಕ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.















.
.
.
.
.
.
.
.
.
.
