ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕಾರ್ಯಕರ್ತನೊಬ್ಬ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕೆಲವು ಹೆಚ್ಚುವರಿ ದಾಖಲೆಗಳನ್ನು ಸಾಕ್ಷ್ಯವಾಗಿ ನೀಡುವಂತೆ ಭಿವಂಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ನ್ಯಾಯಮೂರ್ತಿ ಪೃಥ್ವಿರಾಜ್ ಕೆ ಚವಾಣ್ ಅವರು ಜೂನ್ 26 ರಂದು ರಾಹುಲ್ ಗಾಂಧಿ ಅವರ ಮನವಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದ್ದರು.
ಥಾಣೆಯ ಭಿವಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 3 ರಂದು ರಾಹುಲ್ ಗಾಂಧಿ ವಿರುದ್ಧದ ಪ್ರಕರಣದ ದೂರುದಾರ ರಾಜೇಶ್ ಕುಂಟೆ ಸಲ್ಲಿಸಿದ ಕೆಲವು ದಾಖಲೆಗಳನ್ನು ದಾಖಲಿಸಿದ್ದರು. ಈ ಸಮಯದಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆಪಾದಿತ ಮಾನನಷ್ಟ ಭಾಷಣದ ಪ್ರತಿಯನ್ನು ಸಾಕ್ಷಿಯಾಗಿ ಸ್ವೀಕರಿಸಿತ್ತು, ಅದರ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಯಿತು.
ಇದೇ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಜೇಶ್ ಕುಂಟೆ ಸಲ್ಲಿಸಿರುವ ಇನ್ನೊಂದು ಅರ್ಜಿಯಲ್ಲಿ ಹೈಕೋರ್ಟ್‌ನ ಏಕ ನ್ಯಾಯಾಧೀಶರ ಆದೇಶವನ್ನು ಉಲ್ಲಂಘಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರಾಹುಲ್ ಗಾಂಧಿ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.