Share this news

ಹೆಬ್ರಿ : ಜನವರಿ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದ್ದು, ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ ಕಾರಣ ಎಂದು ಶಿವಪುರದಲ್ಲಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್ ಮತ್ತು ಗುತ್ತಿಗೆದಾರರು ಇದಕ್ಕೆ ನೇರ ಹೊಣೆ ಎಂದು ಆರೋಪಿಸಿ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ರಸ್ತೆಯಲ್ಲಿ ವಾಹನಗಳು ಓಡಾಡಲು ಸೂಕ್ತ ಬ್ಯಾರಿಕೇಡುಗಳಿಲ್ಲ, ಸೂಚನಾ ಫಲಕಗಳು ಅಪಘಾತದ ಸ್ಥಳದಲ್ಲಿ ಇರಲಿಲ್ಲ, ಅಪಘಾತ ನಡೆಸಿದ ಕಾರು ವೇಗದಿಂದ ಬಂದು ಬೈಕಿಗೆ ಗುದ್ದಿದೆ. ಗುತ್ತಿಗೆದಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವುದರಿAದ ನಮ್ಮ ಮನೆ ಮಗನನ್ನು ನಾವು ಕಳೆದುಕೊಂಡಿದ್ದೇವೆ. ಇದಕ್ಕೆ ಗರಿಷ್ಠ 50 ಲಕ್ಷ ರೂಪಾಯಿ ಪರಿಹಾರ ದೊರಕಿಸಿಕೊಡಬೇಕು. ಇಲ್ಲದಿದ್ದಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡಲಾಗುವುದು ಎಂದು ಮೃತ ರಾಹುಲ್ ಅವರ ಮಾವ ಶ್ರೀಧರ ಶೆಟ್ಟಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಅವರ ಶವವನ್ನು ಶಿವಪುರ ಪೇಟೆಯಲ್ಲಿ ಮೆರವಣಿಗೆ ಮಾಡಿಕೊಂಡು ಬರುತ್ತಿರುವಾಗ ಗಮನಿಸಿದ ಗುತ್ತಿಗೆದಾರರು, ಬ್ಯಾರಿಕೇಡ್ ಹಾಕುವ ವ್ಯವಸ್ಥೆ ಮಾಡಿದ್ದಾರೆ. ಮೊದಲೇ ಈ ರೀತಿಯ ಸೂಚನಾ ಫಲಕ ಅಥವಾ ಬ್ಯಾರಿಕೇಡ್ ಬಳಸಿದ್ದರೆ, ಊರಿನ ಒಬ್ಬ ಮಗನನ್ನು ನಾವು ಉಳಿಸಿಕೊಳ್ಳುತ್ತಿದ್ದೆವು ಎಂದು ಸಾರ್ವಜನಿಕರು ದುಃಖ ವ್ಯಕ್ತಪಡಿಸಿದರು.
ಸ್ಥಳೀಯರಾದ ಶ್ರೀನಿವಾಸ್, ಇಂದಿರಾ, ಬಾಬು ಶೆಟ್ಟಿ, ಗುರು ಬಡಿಕಿಲಾಯ, ಶ್ರೀಧರ ಶೆಟ್ಟಿ, ಶೀನ ಇನ್ನಿತರ ಊರಿನ ಮುಖಂಡರು ಜೊತೆಗಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *