

ನವದೆಹಲಿ, ಸೆ.11:: ಭಾರತದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮಗಳಲ್ಲಿ ಒಂದಾದ 18ನೇ ಬ್ರಿಕ್ಸ್ ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಸೆ.12-13 ರಂದು ನಡೆಯಲಿರುವ ಶೃಂಗಸಭೆಗೆ ನವದೆಹಲಿ ಸಜ್ಜಾಗಿದೆ. ಈ ಬ್ರಿಕ್ಸ್ ಒಕ್ಕೂಟದಲ್ಲಿ ಹಲವು ಜಾಗತಿಕ ನಾಯಕರು ಭಾಗಿಯಾಗಲಿದ್ದು, ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ್ದಾರೆ.ಪುಟಿನ್ರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಸ್ವಾಗತಿಸಿ ಬರಮಾಡಿಕೊಂಡಿದ್ದಾರೆ.,ವಿಶೇಷವೆAದರೆ ಉಕ್ರೇನ್ನೊಂದಿಗಿನ ಯುದ್ಧ ಆರಂಭವಾದಾಗಿನಿAದಲೂ 2022ರಿಂದ ರಷ್ಯಾದ ಹೊರಗೆ ನಡೆದ ಬ್ರಿಕ್ಸ್ ಒಕ್ಕೂಟದಲ್ಲಿ ಪುಟಿನ್ ಸ್ವತಃ ಭಾಗವಹಿಸುತ್ತಿರುವುದು ಇದೇ ಮೊದಲ ಬಾರಿಗೆ.
ಈ ಶೃಂಗಸಭೆಗೂ ಮುನ್ನ ಇಂದು ವ್ಲಾಡಿಮಿರ್ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ದ್ವೀಪಕ್ಷೀಯ ಮಾತುಕತೆ ನಡೆಸಲಿದ್ದು,ಉಭಯ ನಾಯಕರು ರಕ್ಷಣಾ, ಇಂಧನ, ತಂತ್ರಜ್ಞಾನ, ಔಷಧಗಳು ಮತ್ತು ಜನರಿಂದ ಜನರಿಗೆ ಸಂಬAಧಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸುವುದರ ಜೊತೆಗೆ ವ್ಯಾಪಕ ಶ್ರೇಣಿಯ ಅಂಶಗಳ ಕುರಿತು ದ್ವೀಪಕ್ಷೀಯ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಬ್ರಿಕ್ಸ್ ಬಿಸಿನೆಸ್ ಫೋರಂನ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಪುಟಿನ್ ಮಾತನಾಡಲಿದ್ದಾರೆ.
ಭಾರತದ ನೇತೃತ್ವದಲ್ಲಿ ನಡೆಯಲಿರುವ ಬ್ರಿಕ್ಸ್ ಒಕ್ಕೂಟದ 18ನೇ ಶೃಂಗಸಭೆಯು ಈ ಬಾರಿ ‘ಸ್ಥಿತಿಸ್ಥಾಪಕತ್ವ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆಗಾಗಿ ನಿರ್ಮಾಣ’ ಎಂಬ ಕಲ್ಪನೆಯಡಿ ನಡೆಯಲಿದೆ. ಈ ಸಭೆಯಲ್ಲಿ ಬ್ರೆಜಿಲ್, ಚೀನಾ, ಈಜಿಪ್ಟ್, ಇಥಿಯೋಪಿಯಾ, ಇಂಡೋನೇಷ್ಯಾ, ಭಾರತ, ಇರಾನ್, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ , ಬೆಲಾರಸ್, ಬೊಲಿವಿಯಾ, ಕ್ಯೂಬಾ, ಕಝಾಕಿಸ್ತಾನ್, ಮಲೇಷ್ಯಾ, ನೈಜೀರಿಯಾ, ಥೈಲ್ಯಾಂಡ್, ಉಗಾಂಡಾ, ಉಜ್ಬೇಕಿಸ್ತಾನ್ ಮತ್ತು ವಿಯೆಟ್ನಾಂ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ.
ಜಾಗತಿಕ ನಾಯಕರೊಂದಿಗೆ ಪುಟಿನ್ ಭೇಟಿ
ಪ್ರಧಾನಿ ನರೇಂದ್ರ ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆಯ ನಡುವೆ ರಷ್ಯಾದ ಅಧ್ಯಕ್ಷ ಪುಟಿನ್ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಸೇರಿದಂತೆ ಇತರ ಅಂತಾರಾಷ್ಟ್ರೀಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಇನ್ನು, ಈ ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಆಗಮಿಸುತ್ತಿದ್ದರೂ ಸಹ ಪುಟಿನ್ ಅವರೊಂದಿಗೆ ಅವರ ಭೇಟಿಯ ಕುರಿತಂತೆ ಈವರೆಗೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.





.
.
.
.
.
.
.
.
.
.
.
.
.
.
.
.
.
.
.
.
