ಉಡುಪಿ: ಸಹಕಾರ ಭಾರತಿಯ ನೂತನ ರಾಜ್ಯಾಧ್ಯಕ್ಷ ಪ್ರಭುದೇವ ಆರ್ ಮಾಗನೂರ್ ಅವರು ಡಿ.28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದರು. ಉಡುಪಿಯ ವಾಸುಕಿ ಟವರ್ಸ್ ನ ಕಿಸಾನ್ ಸಭಾ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಚರ್ಚಿಸಿದರು.
ಈ ಸಂದರ್ಭದಲ್ಲಿ ಪ್ರಭುದೇವ ಆರ್ ಮಾಗನೂರ್ ರವರಿಗೆ ಉಡುಪಿ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ದಿನೇಶ್ ಹೆಗಡೆ ಶಾಲು ತೊಡಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಹಕಾರ ಭಾರತಿ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ರಾಜ್ಯ ಸಂಘಟನಾ ಪ್ರಮುಖ ಮಂಜುನಾಥ, ರಾಜ್ಯ ಮಹಿಳಾ ಪ್ರಮುಖರಾದ ವಿದ್ಯಾ ಪೈ, ರಾಜ್ಯದ ನೂತನ ಹಾಲು ಪ್ರಕೋಷ್ಠದ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಮಂಜುನಾಥ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯಕ್ , ಸಂಘಟನಾ ಕಾರ್ಯದರ್ಶಿ ಸುಜಿತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.