
ಬೆಂಗಳೂರು, ಜು.31:ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಫಾಸ್ಟ್ ಫುಡ್ ಹಾಗೂ ಜಂಕ್ ಫುಡ್ ಮಾರಾಟದ ಕುರಿತು ಆರೋಗ್ಯ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಇನ್ನುಮುಂದೆ ರಾಜ್ಯದ ಶಾಲಾ-ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಸಕ್ಕರೆ ಮತ್ತು ಉಪ್ಪು ಹೊಂದಿರುವ ಆಹಾರ ಪದಾರ್ಥಗಳು ಹಾಗೂ ಜಂಕ್ ಫುಡ್‌ಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಆರೋಗ್ಯ ಇಲಾಖೆ ಇತ್ತೀಚೆಗೆ ನಡೆಸಿದ ತಪಾಸಣೆ ವೇಳೆ, ಶಾಲಾ ಮಕ್ಕಳಿಗೆ ನೀಡುವ ಆಹಾರದಲ್ಲಿ ಬಿಳಿ ಬ್ರೆಡ್, ಪಾಸ್ತಾ ಮತ್ತು ಸಂಸ್ಕರಿಸಿದ ತಿಂಡಿಗಳAತಹ ಶುದ್ಧೀಕರಿಸಿದ ಕಾರ್ಬೋಹೈಡ್ರೇಟ್‌ಗಳ ಬಳಕೆ ಹೆಚ್ಚಾಗಿರುವುದು ಕಂಡುಬAದಿದೆ. ಇದು ಮಕ್ಕಳ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ದಿಢೀರ್ ಏರಿಸಿ, ಏಕಾಗ್ರತೆ ಮತ್ತು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವುದನ್ನು ಗಮನಿಸಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಾಲೆ, ಕಾಲೇಜು ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಟ್ರಾನ್ಸ್ ಫ್ಯಾಟ್, ಅಧಿಕ ಸಕ್ಕರೆ ಹಾಗೂ ಅಧಿಕ ಉಪ್ಪು ಹೊಂದಿರುವ ಆಹಾರ ಪದಾರ್ಥಗಳ ಮಾರಾಟ, ಉಚಿತ ವಿತರಣೆ, ಜಾಹೀರಾತು ಮತ್ತು ಪ್ರಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಶಾಲಾ ಆವರಣದಲ್ಲಿ ಜಂಕ್ ಫುಡ್‌ಗಳು ಸಿಗದಂತೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಹಾಗೂ ಶಾಲಾ ಪ್ರಮುಖ ಸ್ಥಳಗಳಲ್ಲಿ ಜಂಕ್ ಫುಡ್ ವಿರೋಧಿ ಎಚ್ಚರಿಕೆ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಈ ನಿಯಮಾವಳಿಗಳನ್ನು ಉಲ್ಲಂಘಿಸಿ ಜಂಕ್ ಫುಡ್ ಮಾರಾಟ ಮಾಡಿದರೆ ಅವರ ವಿರುದ್ಧ ಹಾಗೂ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.




.
.
.
.
.
.
.
.
.
.
.
.
.
.
.
.
.
.
.
.
