Share this news

ಕಾರ್ಕಳ,ನ.16: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಪಕ್ಷದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಭಾಗವಾಗಿ ಕೆಪಿಸಿಸಿ ನಿರ್ದೇಶನದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸಂಘಟನ್ ಸೃಜನ್ ಅಭಿಯಾನ-2 ಕಾರ್ಯಕ್ರಮವು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ವಿಧಾನಪರಿಷತ್ ಸದಸ್ಯರು, ಸಂಘಟನ್ ಸೃಜನ್ ಅಭಿಯಾನದ ಉಸ್ತುವಾರಿಗಳಾದ ಐವನ್ ಡಿ’ಸೋಜಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ನೀಡಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ನಿರ್ದೇಶನದಂತೆ ಪ್ರತೀ ಬ್ಲಾಕ್ ಮಟ್ಟದಲ್ಲಿ ನಮ್ಮ ಸಮಿತಿಯು ಕೆಲಸ ಮಾಡುತ್ತಿದೆ ಎಂದರು.

ಅಭಿಯಾನದ ವೀಕ್ಷಕರಾಗಿ ಆಗಮಿಸಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮಾತನಾಡಿ, ಪಕ್ಷದ ನಾಯಕತ್ವವನ್ನು ವಹಿಸಿಕೊಳ್ಳಲು ಸೂಕ್ತ ವ್ಯಕ್ತಿಗಳನ್ನು ಅಯ್ಕೆ ಮಾಡುವ ಈ ಪ್ರಕ್ರಿಯೆಯಿಂದಾಗಿ ಪ್ರತಿಯೊಬ್ಬರಿಗೂ ಅವಕಾಶ ಸಿಗುತ್ತದೆ ಎಂದರು.
ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ, ಈ ಅಭಿಯಾನದಿಂದ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಅನುಕೂಲವಾಗಲಿದೆ ಎಂದರು. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸಿಗರು ಪ್ರಸಿದ್ದ ನ್ಯಾಯವಾದಿಗಳಾದ ಶೇಖರ ಮಡಿವಾಳ ಅವರಿಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳಕೆಬೈಲ್, ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ, ನಿಯೋಗದ ಸದಸ್ಯರಾದ ಶ್ರೀಮತಿ ಶಾಲೆಟ್ ಪಿಂಟೋ, ಅಬ್ದುಲ್ ರವೂಪ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರದೀಪ್ ಬೇಲಾಡಿ ನಿರೂಪಿಸಿ ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ ಮಾಳ ಧನ್ಯವಾದವಿತ್ತರು

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *