ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಗಾಂಧೀ ಜಯಂತಿ ಕಾರ್ಯಕ್ರಮದ ಅಂಗವಾಗಿ SLRM ಘಟಕದ ಸ್ವಚ್ಚತಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಕಳದ ಪೆರ್ವಾಜೆ ಶಾಲೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಐವರು ಸ್ವಚ್ಛತಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ Namathi Resource management Pvt Ltdನ ಸಂಸ್ಥಾಪಕ ಹಾಗೂ ನಿರ್ದೇಶಕ ಮೂರ್ತಿ, ಟಿ, ರೋಟರಿ ಕ್ಲಬ್ ನ ಮಾರ್ಗದರ್ಶಕರಾದ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಆದಿರಾಜ್, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ, ಆನ್ಸ್ ಅಧ್ಯಕ್ಷೆ ಶರ್ಮಿಳಾ ರಮೇಶ್ ಶೆಟ್ಟಿ, ಗಣೇಶ್ ಬರ್ಲಾಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಣೂರು ಗ್ರಾಮದ ಅನ್ನಪೂರ್ಣ,ಯರ್ಲಪಾಡಿ ಗ್ರಾಮದ ಪವಿತ್ರ , ನಂದಳಿಕೆ ಗ್ರಾಮದ ಪ್ರತಿಮಾ ,ಕೆರ್ವಾಶೆ ಗ್ರಾಮದ ದೀಪಿಕಾ ಮತ್ತು ನಿಟ್ಟೆ ಗ್ರಾಮದ ಪ್ರೇಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮಾಧವಿ.ಕೆ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಬರ್ಲಾಯ ವಂದಿಸಿದರು.