
ಕಾರ್ಕಳ,ಜು.೨೨: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಮಠದಕೆರೆ ಬಳಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಗಣೇಶ (೪೮ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕೂಲಿ ಕೆಲಸ ಮಾಡಿಕೊಂಡಿದ್ದ ಗಣೇಶ್ ಅವರು ಹಲವು ಸಮಯದಿಂದ ವಿಪರೀತ ಮದ್ಯಪಾನ ಮಾಡುತ್ತಿದ್ದು, ಅವಿವಾಹಿತರಾಗಿದ್ದರು. ಯಾವುದೋ ಕಾರಣಕ್ಕೆ ಮನನೊಂದು ಜು.೨೧ ರಮದು ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
