
ಕಾರ್ಕಳ,ಜು.18: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಕುಬೇರ ಕೋಳಿ ಫಾರ್ಮ್ ಬಳಿ ಎಂಬಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರಕ್ಷಿತ್ ಶೆಟ್ಟಿ, ಪ್ರವೀಣ್ ದೇವಾಡಿಗ ಮತ್ತು ಇತರರು ಸೇರಿಕೊಂಡು ಜು.16 ರಂದು ಹಾಡಿಯಲ್ಲಿ ಕೋಳಿಗಳ ಕಾಲಿಗೆ ಹಿಂಸಾತ್ಮಕ ರೀತಿಯಲ್ಲಿ ಹರಿತವಾದ ಚೂರಿಯನ್ನು ಕಟ್ಟಿ, ಕೋಳಿಗಳ ಮೇಲೆ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿರುವುದಾಗಿ ಖಚಿತ ಮಾಹಿತಿ ಬಂದ ಮೇರೆಗೆ ಕಾರ್ಕಳ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶಿವಕುಮಾರ್ ಅವರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಜೂಜಾಟಕ್ಕೆ ಉಪಯೋಗಿಸಿದ 12,000 ರೂ. ಬೆಲೆಯ ಜೀವಂತ 5 ಕೋಳಿಗಳು, ನಗದು 4,370 ರೂ. ಸೇರಿದಂತೆ ಆಟಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
