ಕಾರ್ಕಳ : ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಸರಕಾರಿ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿದಂತೆ ಬಸ್ಸಿನಲ್ಲಿದ್ದ 13 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಬೆಳಗಾವಿಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಸಾಣೂರು ರಾಮಮಂದಿರದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋಗೆ ವೇಗವಾಗಿ ಬಂದು ಡಿಕ್ಕಿಯಾಗಿದ್ದು, ಬಸ್ಸಿನ ಮುಂಭಾಗ ನುಜ್ಜುಗುಜ್ಕಾಗಿದೆ.
ಅಪಘಾತದ ರಭಸಕ್ಕೆ ಟೆಂಪೋ ಫುಟ್ ಪಾತ್ ಮೇಲೆ ಏರಿ ನಿಂತಿದ್ದು, ಬಸ್ಸು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.