
ಕಾರ್ಕಳ, ಜೂ.30: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಬಾರಾಡಿ ಚೆಕ್ ಪೋಸ್ಟ್ ಬಳಿ ಸೋಮವಾರ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರ್ಕಳ ನಗರ ಠಾಣೆ ಹೆಡ್ ಕಾನ್ಸ್‌ಟೇಬಲ್ ನಾಗರಾಜ ಅವರು ಬಾರಾಡಿ ಕ್ರಾಸ್ ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ವೇಳೆ ಮೂಡಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಕೆಂಪುಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಪರಿಶೀಲಿಸಿದಾಗ ಕೊಡ್ಯಡ್ಕ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ತೆಗೆದಿರಿಸಿದ 300 ಕಲ್ಲುಗಳನ್ನು ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದಾಗಿ ಲಾರಿ ಚಾಲಕ ಅಭಿಲಾಶ್ ಶೆಟ್ಟಿ ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.




.
.
.
.
.
.
.
.
.
.
.
.
.
.
.
.
.

ಕಾರ್ಕಳ,ಜೂ.29 : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪೊಲೀಸ್ ಇಲಾಖೆಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು ಜೂ. 29 ಸೋಮವಾರ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಕಳ ವೃತ್ತ ನೀರಿಕ್ಷಕ ಸಂದೀಪ್ ಜಿ ಎಸ್ ಮಾತನಾಡಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳಿದ್ದು ಕರ್ನಾಟಕದ ವಿವಿಧ ಭಾಗದ ಜನರು ಹೆಚ್ಚಿನ ಸಂಖ್ಯೆಯಲಿದ್ದಾರೆ. ಆದರೆ
ಕರಾವಳಿ ಕರ್ನಾಟಕ ಭಾಗದ ಜನರ ಪ್ರಾತಿನಿಧ್ಯ ಬಹಳ ಕಮ್ಮಿ ಇದೆ, ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪೊಲೀಸ್ ಇಲಾಖೆಯಲ್ಲಿದ್ದಾರೆ. ಈ ಭಾಗದ ಜನರು ಬುದ್ದಿವಂತರು ವಿದ್ಯಾವಂತರು ಇಂತಹ ಅವಕಾಶಗಳನ್ನು ಸದ್ಭಳಕೆ ಮಾಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಎಂ ಎಸ್ ಮಾತನಾಡಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಸವಲತ್ತು ಹಾಗೂ ಕೆಲಸದ ಉಪಯೋಗಗಳ ಪೂರ್ಣ ಮಾಹಿತಿ ನೀಡಿದರು.
ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು
ಈ ಸಂದರ್ಭದಲ್ಲಿ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರಿಕ್ಷಕರು(ತನಿಖೆ ) ನವೀನ್ ಬೊರ್ಕರ್, ಪ್ರೊಬೆಷನರಿ ಪಿಎಸ್ಐ ಸೀಮಾ ಅಂಜುಮ್ ಉಪಸ್ಥಿತರಿದ್ದರು.




.
.
.
.
.
.
.
.
.
.
.
.
.
.
.
.
.
.
.
.
.
.
.
