ಹೆಬ್ರಿ: ತಾಲೂಕಿನ ನಾಡ್ಪಾಲು ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತ ಶೋಧ ಕಾರ್ಯ ಮುಂದುವರಿದಿದೆ.
ತನಿಖೆಯನ್ನು ಹೆಬ್ರಿ ಪೊಲೀಸ್ ಠಾಣೆಗೆ ನೀಡಲಾಗಿದ್ದು ಡಿವೈಎಸ್ಪಿ ನೇತೃತ್ವದಲ್ಲಿ ಹೆಬ್ರಿ ಪೊಲೀಸರು ಹಾಗೂ ಎಎನ್‌ಎಫ್ ಸಿಬಂದಿ ಎನ್‌ಕೌಂಟರ್ ಪ್ರದೇಶದ ಸುತ್ತಮುತ್ತ ಶೋಧ ಕಾರ್ಯ ನಡೆಸುತ್ತಿದ್ದಾರೆ. ವಿಕ್ರಂ ಗೌಡನೊಂದಿಗೆ ಇದ್ದ ನಕ್ಸಲರು ತಪ್ಪಿಸಿಕೊಂಡಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರಿದಿದೆ .
ಎನ್‌ಕೌಂಟರ್ ಪ್ರಕರಣದ ಬಳಿಕ ಕಬ್ಬಿನಾಲೆ ಸುತ್ತಮುತ್ತ ಜನ ಭಯಭೀತರಾಗಿದ್ದಾರೆ. ಎನ್‌ಕೌಂಟರ್ ಪ್ರಕರಣ ನಡೆದ ಮನೆಯ ವಾರಸುದಾರರು ಇನ್ನು ಕೂಡ ಮನೆ ಕಡೆ ತೆರಳಿಲ್ಲ. ವಿಕ್ರಂ ಗೌಡ ಮೃತಪಟ್ಟ ಹಿನ್ನೆಲೆಯಲ್ಲಿ ಆ ಮನೆಯಲ್ಲಿ ಪೂಜಾ ಕಾರ್ಯದ ಬಳಿಕ ಮನೆಗೆ ಪ್ರವೇಶ ಮಾಡುತ್ತಾರೆ . ಪಕ್ಕದ ಮನೆಯಲ್ಲಿ ಎಎನ್‌ಎಫ್ ತಂಡ ಬೀಡು ಬಿಟ್ಟಿದೆ. ಇದರಿಂದ ಈ ಮನೆಯಲ್ಲಿ ವಾಸಿಸುವವರು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಾರೆ , ಪ್ರಕರಣದ ಬಳಿಕ ಈ ಭಾಗದ ಜನ ಇನ್ನೂ ಕೂಡ ಸಹಜ ಸ್ಥಿತಿಯತ್ತ ಬಂದಿಲ್ಲ.
ಎನ್‌ಕೌಂಟರ್ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಮರುಣೋತ್ತರ ಪರೀಕ್ಷೆ ಮತ್ತು ಎಫ್‌ಎಸ್‌ಎಲ್ ತಜ್ಞರ ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರಕರಣದ ತನಿಖಾಧಿಕಾರಿ, ಕಾರ್ಕಳ ಡಿವೈಎಸ್ ಪಿ. ಅರವಿಂದ್ ತಿಳಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ. ಎಲ್ಲ ಆಯಾಮಗಳಿಂದಲೂ ವಿಚಾರಣೆ ನಡೆಸಿ, ಸ್ಥಳ ಮಹಜರು, ಪರಿಶೀಲನೆ ಕೈಗೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿವೈಎಸ್‌ಪಿ ತಿಳಿಸಿದ್ದಾರೆ.

ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.