Share this news

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿದ್ದು, ಹೊಸ ನಿಯಮದಂತೆ ಇನ್ನು ಮುಂದೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಮಾತ್ರ ಇರಲಿದೆ ಎಂದು ತಿಳಿಸಿದೆ.

ಈವರೆಗಿನ ಪರೀಕ್ಷೆಗಳು 3 ಗಂಟೆ ಅವಧಿಗೆ ನಡೆಯುತ್ತಿದ್ದವು. ಆದರೆ, ಇನ್ಮುಂದೆ ಅದರಲ್ಲಿ15 ನಿಮಿಷ ಕಡಿತವಾಗಲಿದೆ. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿ, ಅರ್ಥೈಸಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ. ಈ ಹಿಂದೆಯೂ ಪ್ರಶ್ನೆಗಳನ್ನು ಓದಿಕೊಳ್ಳಲು 15 ನಿಮಿಷವನ್ನು ಹೆಚ್ಚುವರಿಯಾಗಿ ಕೊಡಲಾಗುತ್ತಿತ್ತು.

ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತಿತ್ತು. 2023-24 ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು.

ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ, ಭೌತಶಾಸ್ತ್ರ, ರಸಾಯನ ಶಾಸ್ತ್ರ ಸೇರಿದಂತೆ ಪ್ರಾಯೋಗಿಕ ಪರೀಕ್ಷೆಯ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು 70 ಅಂಕ ಹಾಗೂ ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವಾಗ ಪಠ್ಯ ಹೊರತಾದ ಪ್ರಶ್ನೆಗಳಿಗೆ ಅವಧಿಕಾಶ ನೀಡಬಾರದು. ಪಠ್ಯಕ್ರಮದಲ್ಲೇ ಇರುವ ವಿಯಷಗಳ ಮೇಲಷ್ಟೇ ಪ್ರಶ್ನೆಗಳನ್ನು ಸಿದ್ಧಪಡಿಸುವುದು ಕಡ್ಡಾಯ ಎಂದು ಹೇಳಿದೆ.

ವಿದ್ಯಾರ್ಥಿಗಳು 80 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು ಒಟ್ಟು 120 ಅಂಕಗಳ ಪ್ರಶ್ನೆಗಳನ್ನು ಹೊಂದಿರಲಿದ್ದು, ಅವಧಿುಗಳಲ್ಲಿ 80 ಅಂಕಗಳಿಗಷ್ಟೇ ಉತ್ತರಿಸಬೇಕು. 70 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು 105 ಅಂಕಗಳ ಪ್ರಶ್ನೆಗಳನ್ನು ಹೊಂದಿರಲಿದ್ದು, ಅವಧಿಗಳಲ್ಲಿ70 ಅಂಕಗಳಿಗಷ್ಟೇ ಉತ್ತರಿಸಬೇಕು ಎಂದು ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.

 

 

 

    

                       in 

                          

                        

                       

Leave a Reply

Your email address will not be published. Required fields are marked *