ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ 81.50 ಫಲಿತಾಂಶ ಬಂದಿದೆ.
ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ (97%) ಪ್ರಥಮ ಹಾಗೂ ಉಡುಪಿ ಜಿಲ್ಲೆ (96.80%) ದ್ವಿತೀಯ ಸ್ಥಾನ ಪಡೆದಿದೆ. ವಿಜಯಪುರ ಮೂರನೇ ಸ್ಥಾನ (94.89%) ಪಡೆದು ಅಚ್ಚರಿ ಮೂಡಿಸಿದೆ. ಇತ್ತ ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಶಿಖಾ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದರು
ಪಿಯುಸಿ ಕಲಾವಿಭಾಗದಲ್ಲಿ ಬೆಂಗಳೂರಿನ ಮೇಧಾ.ಡಿ, ವಿಜಯಪುರದ ವೇದಾಂತ್ ತಲಾ 596 ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 597 ಅಂಕ, ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ 598 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಎನಿಸಿದ್ದಾರೆ.
ರಾಜ್ಯದ ಸುಮಾರು 1,124 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, 81.15% ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿದ್ಯಾರ್ಥಿಳು 1.74,315, ಕಲಾವಿಭಾಗದಲ್ಲಿ 1,28, 448, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.