ಕಾರ್ಕಳ : ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಕಾರ್ಕಳದ ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ನ ಶೌಚಾಲಯ ಗೋಡೆಯಲ್ಲಿ ದೇಶ ದ್ರೋಹ ಬರವಣಿಗೆಯನ್ನು ಬರೆದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿಯು ಕಾರ್ಕಳ ಗ್ರಾಮಾಂತರ ಪೊಲೀಸರಿಗೆ ಮನವಿ ಸಲ್ಲಿಸಿದೆ.
ದೇಶ ವಿರೋಧಿ ಚಟುವಟಿಕೆ ದೇಶದ ಅಂತರಿಕ ಭದ್ರತೆಗೆ ಆತಂಕ ಸೃಷ್ಟಿಸುವ ಕೃತ್ಯವಾಗಿದ್ದು,ಯುದ್ಧದ ಸಂದರ್ಭದಲ್ಲಿ ದೇಶದಲ್ಲಿ ನಡೆಯುತಿರುವ ಸೈನ್ಯ ಹಾಗೂ ಕೇಂದ್ರ ಸರಕಾರದ ರಾಜತಾಂತ್ರಿಕ ನಿರ್ಧಾರಗಳನ್ನು ದೇಶದ ಎಲ್ಲಾ ನಾಗರಿಕರು ಪಕ್ಷಾತೀತವಾಗಿ ಬೆಂಬಲಿಸುತ್ತಿರುವ ಸಂದರ್ಭದಲ್ಲಿ ಎಲ್ಲರಲ್ಲೂ ದೇಶಾಭಿಮಾನವನ್ನು ಹೆಚ್ಚಿಸುತಿದ್ದು, ನಮ್ಮ ದೇಶದ ಸೈನ್ಯದ ತ್ಯಾಗ ಮತ್ತು ಸೇವೆಯನ್ನು ಇಡೀ ದೇಶವೇ ಕೊಂಡಾಡುತ್ತಿರುವುದು ಗಮನಾರ್ಹ ಸಂಗತಿ. ಇಂತಹ ಸಂದರ್ಭದಲ್ಲಿ ಒಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿಯ ಚಟುವಟಿಕೆ ಕಂಡು ಬಂದಿರುವುದು ಅವಮಾನಿಯ. ಈ ರೀತಿಯ ದೇಶ ದ್ರೋಹದ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅಂತಹ ವಿದ್ಯಾರ್ಥಿಗಳನ್ನು ಕಾಲೇಜ್ ನಿಂದ ಅಮಾನತುಗೊಳಿಸಬೇಕೆಂದು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ, ಉಡುಪಿ ಜಿಲ್ಲಾಧ್ಯಕ್ಷ ಸ್ವಯಂ ಶೆಟ್ಟಿ , ಪಧಾಧಿಕಾರಿಗಳಾದ ಸ್ಮರಣ್ ನಿಟ್ಟೆ ,ಅಭಿಲಾಷ್ ನಿಟ್ಟೆ , ಕಾರ್ಕಳ ತಾಲೂಕು ಅಧ್ಯಕ್ಷ ಪ್ರತೀಕ್ ಶೆಟ್ಟಿ , ಸನ್ನಿ ನೇಲ್ಸನ್ ಡಿಸೋಜ ಉಪಸ್ಥಿತರಿದ್ದರು.