Share this news

ಕಾರ್ಕಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ನಲ್ಲಿ ಗೋಡೆಗಳಲ್ಲಿ ದೇಶದ್ರೋಹದ ಗೋಡೆ ಬರಹಗಳನ್ನು ಬರೆಯಲಾಗಿದ್ದು, ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಕಾಲೇಜು ನಿರ್ದೇಶಕ ಮಂಡಳಿಗೆ ಮನವಿ ಸಲ್ಲಿಸಿದೆ.

ಪಾಕಿಸ್ತಾನದ ವಿರುದ್ಧ ಭಾರತದ ಸೇನೆಯ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ವಿರೋಧಿಸುವ ಮೂಲಕ ದೇಶದ ಭದ್ರತೆಯ ಅಪಾಯಕಾರಿ ಬೆಳವಣಿಗೆಯಾಗಿದೆ. ಭಾರತದ ಸೇನೆಯ ತ್ಯಾಗ, ಬಲಿದಾನ ಹಾಗೂ ಸಮರ್ಪಣಾ ಮನೋಭಾವವನ್ನು ಇಡೀ ದೇಶವೇ ಕೊಂಡಾಡುತ್ತಿದೆ.ಆದರೆ ನಿಟ್ಟೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ದೇಶದ್ರೋಹದ ಬರಹ ಕಂಡುಬಂದಿರುವುದು ನಿಜಕ್ಕೂ ಶಿಕ್ಷಣ ಸಂಸ್ಥೆಗೆ ಅವಮಾನಕರ ವಿಚಾರವಾಗಿದೆ.ಆದ್ದರಿಂದ ತಕ್ಷಣವೇ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿಗಳು ಮನವಿಯಲ್ಲಿ ಒತ್ತಾಯಿಸಿದ್ದಾರೆ.

 

 

 

 

 

 

 

 

 

Leave a Reply

Your email address will not be published. Required fields are marked *